‘ಕಿಸಿ ಕಾ ಭಾಯ್ ಕಿಸಿ ಕಿ ಜಾನ್’ ಟೀಸರ್ ಜ.25ರಂದು ಬಿಡುಗಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅಭಿನಯದ ‘ಕಿಸಿ ಕಾ ಭಾಯ್ ಕಿಸಿ ಕಿ ಜಾನ್ʼ ಟೀಸರ್‌ ಜನವರಿ 25ರಂದು ಬಿಡುಗಡೆಯಾಗಲಿದೆ.

ಈ ಕುರಿತು ಸ್ವತಃ ಸಲ್ಮಾನ್‌ ಖಾನ್‌ ಅವರೇ ಟ್ವಿಟ್ಟರ್‌ ನಲ್ಲಿ ಪೋಸ್ಟ್‌ ಅನ್ನು ಹಂಚಿಕೊಂಡಿದ್ದಾರೆ.

ನಾಲ್ಕು ವರ್ಷಗಳ ನಂತರ ಸಲ್ಮಾನ್ ‘ಕಿಸಿ ಕಾ ಭಾಯ್ ಕಿಸಿ ಕಿ ಜಾನ್’ ಚಲನಚಿತ್ರದ ಮೂಲಕ ಈದ್ ವಾರಾಂತ್ಯದಲ್ಲಿ ತೆರೆಯ ಮೇಲೆ ಕಾಣಲಿದ್ದಾರೆ. ಚಿತ್ರದ ಚಿತ್ರೀಕರಣ ಮುಗಿದಿದ್ದು, ವೆಂಕಟೇಶ್, ಪೂಜಾ ಹೆಗ್ಡೆ, ಶೆಹನಾಜ್ ಗಿಲ್, ಪಾಲಕ್ ತಿವಾರಿ, ಬಾಕ್ಸರ್ ವಿಜೇಂದ್ರ ಸಿಂಗ್ ಮುಂತಾದವರು ನಟಿಸಿದ್ದಾರೆ.

ಈ ಚಿತ್ರವನ್ನು ಫರ್ಹಾದ್ ಸಾಮ್ಜಿ ನಿರ್ದೇಶಿಸಿದ್ದಾರೆ ಮತ್ತು ಸಾಜಿದ್ ನಾಡಿಯಾಡ್ವಾಲಾ ನಿರ್ಮಿಸಿದ್ದಾರೆ. ಸಲ್ಮಾನ್ ಅವರು ಟೈಗರ್ ಪಾತ್ರವನ್ನು ಹೋಲುವ ‘ಪಠಾನ್’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಸಿಕೊಳ್ಳಲಿದ್ದಾರೆ. ಇದಲ್ಲದೆ ಅವರ ಪೈಪ್‌ಲೈನ್‌ನಲ್ಲಿ ‘ಟೈಗರ್ 3’ ಕೂಡ ಇದೆ, ಇದರಲ್ಲಿ ಕತ್ರಿನಾ ಕೈಫ್ ಮತ್ತು ಇಮ್ರಾನ್ ಹಶ್ಮಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!