ಹೊಸದಿಗಂತ ಡಿಜಿಟಲ್ ಡೆಸ್ಕ್:
ಪರ ಸ್ತ್ರೀ ಜೊತೆ ಸಲುಗೆಯಿಂದ ಇದ್ದ ಪತಿಯ ಕಾಲು ಮುರಿಯಲು ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ವೆಂಕಟೇಶ್ ಎಂಬಾತ ಎರಡು ಕಾಲು ಮುರಿತಕ್ಕೆ ಒಳಗಾದ ಪತಿ, ಸುಪಾರಿ ನೀಡಿದ ಪತ್ನಿ ಉಮಾದೇವಿ ಹಾಗೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾಗ ಉಮಾದೇವಿಯ ಅಸಲಿ ಬಣ್ಣ ಬಯಲಾಗಿದೆ. ಪತಿಯ ಎರಡೂ ಕಾಲುಗಳನ್ನ ಮುರಿಯಲು 5 ಲಕ್ಷಕ್ಕೆ ಪತ್ನಿ ಸುಪಾರಿ ನೀಡಿದ್ದಳು ಎನ್ನಲಾಗಿದೆ. ಸದ್ಯ ಸುಪಾರಿ ನೀಡಿದ ಪತ್ನಿ ಸೇರಿದಂತೆ ಆರೋಪಿಗಳನ್ನ ಬ್ರಹ್ಮಪೂರ ಪೊಲೀಸರು ಬಂಧಿಸಿದ್ದಾರೆ.