ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೀನಾದ ಕುರಿತು ಕಾಂಗ್ರೆಸ್ ಸಾಗರೋತ್ತರ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಸ್ಯಾಮ್ ಪಿತ್ರೋಡಾ ಭಾರತ ವಿರೋಧಿ ಹೇಳಿಕೆ ನೀಡಿದ್ದಲ್ಲದೆ, ಬೆಂಗಳೂರಿನಲ್ಲಿ ಯಲಹಂಕ ಅರಣ್ಯ ಪ್ರದೇಶದಲ್ಲಿ ಭೂಮಿಯನ್ನು ಲೀಸ್‌ಗೆ ಮಂಜೂರು ಮಾಡಿದ್ದು, 5 ವರ್ಷಗಳ ಗುತ್ತಿಗೆ ಅವಧಿಯನ್ನು ಪಡೆದಿದ್ದಾರೆ, ಅವರು ಗುತ್ತಿಗೆಯನ್ನು ನವೀಕರಿಸಿಲ್ಲ ಅಥವಾ ಹಿಂತಿರುಗಿಸಿಲ್ಲ. ಅವರು ಅದನ್ನು ಅಕ್ರಮವಾಗಿ ಇಟ್ಟುಕೊಂಡಿದ್ದಾರೆ. ರಾಹುಲ್ ಗಾಂಧಿ ಅವರ ಮಾರ್ಗದರ್ಶನದಲ್ಲಿ ಈಗಾಗಲೇ ಭಾರತ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಭೂಮಿಯನ್ನು ರಾಜ್ಯ ಸರ್ಕಾರ ಸ್ವಾಧೀನಪಡಿಸಿಕೊಳ್ಳಬೇಕು ಮತ್ತು ಅವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕು ಎಂದು ಜೋಶಿ ಕಿಡಿಕಾರಿದ್ದಾರೆ.