ಹೊಸದಿಗಂತ ಡಿಜಿಟಲ್ ಡೆಸ್ಕ್
ಹೊಸದಿಲ್ಲಿ: ಸಮಾಜವಾದಿ ಪಾರ್ಟಿಯ ವರಿಷ್ಠ ಅಖಿಲೇಶ್ ಯಾದವ್ ಅವರು ಇಂದು ತಮ್ಮ ಲೋಕಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾದ ಅಖಿಲೇಶ್ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಅಖಿಲೇಶ್ ಉತ್ತರ ಪ್ರದೇಶದ ಅಜಂಗಢ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದರು. ಅವರು ಯುಪಿ ವಿಧಾನಸಭೆ ಚುನಾವಣೆಯಲ್ಲಿ ಮೈನ್‌ಪುರಿಯ ಕರ್ಹಾಲ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಅಖಿಲೇಶ್ ಯಾದವ್ ಅವರು ವಿಧಾನಸಭಾ ಚುನಾವಣೆಯಲ್ಲಿ ಕರ್ಹಾಲ್ ಕ್ಷೇತ್ರದಿಂದ 67,504 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಮತ್ತು ಕೇಂದ್ರ ಸಚಿವ ಎಸ್‌ಪಿ ಸಿಂಗ್ ಬಘೇಲ್ ಅವರನ್ನು ಸೋಲಿಸಿದ್ದರು. ಅಖಿಲೇಶ್ ಯಾದವ್ 1,48,196 ಮತಗಳನ್ನು ಪಡೆದರೆ, ಎಸ್ಪಿ ಸಿಂಗ್ ಬಘೇಲ್ 80,692 ಮತಗಳನ್ನು ಗಳಿಸಿದರು. ಆದರೆ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಾರ್ಟಿ ಹೀನಾಯ ಸೋಲನುಭವಿಸಿದೆ. ಎಸ್ಪಿಗೆ ಕೇವಲ 111 ಸ್ಥಾನಗಳನ್ನಷ್ಟೇ ಗಳಿಸಲು ಸಾಧ್ಯವಾಗಿದೆ.