ಮಹಾರಾಷ್ಟ್ರ ವಿಧಾನಸಭೆಯಿಂದ ಸಮಾಜವಾದಿ ಶಾಸಕ ಅಬು ಅಸಿಮ್ ಅಜ್ಮಿ ಅಮಾನತು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಔರಂಗಜೇಬನನ್ನು ಹೊಗಳಿದ್ದ ಸಮಾಜವಾದಿ ಪಕ್ಷದ ಶಾಸಕ ಅಬು ಅಸಿಮ್ ಅಜ್ಮಿ ಅವರನ್ನು ಮಹಾರಾಷ್ಟ್ರ ವಿಧಾನಸಭೆಯ ಬಜೆಟ್ ಅಧಿವೇಶನದಿಂದ ಬುಧವಾರ ಅಮಾನತುಗೊಳಿಸಲಾಗಿದೆ.

ವಿಧಾನಸಭೆಯ ಬಜೆಟ್ ಅಧಿವೇಶನ ಮಾರ್ಚ್ 26ರ ವರೆಗೆ ನಡೆಯಲಿದೆ. ಅಲ್ಲಿಯವರೆಗೂ ಅಬು ಅಜ್ನಿ ಅಮಾನತಿನಲ್ಲಿ ಇರಲಿದ್ದಾರೆ.

ಸಚಿವ ಚಂದ್ರಕಾಂತ್ ಪಾಟೀಲ್ ಅವರು ಇಂದು ಸದನದಲ್ಲಿ ಅಬು ಅಜ್ಮಿ ಅವರನ್ನು ಸದನದಿಂದ ಅಮಾನತು ಮಾಡುವ ಪ್ರಸ್ತಾವನೆ ಮಂಡಿಸಿದರು. ಧ್ವನಿ ಮತದ ಮೂಲಕ ನಿರ್ಣಯವನ್ನು ಅಂಗೀಕರಿಸಲಾಯಿತು. ಬಳಿಕ ಎಸ್​ಪಿ ಶಾಸಕ ಸದನದಿಂದ ಅಮಾನತಾಗಿದ್ದಾಗಿ ಸ್ಪೀಕರ್​ ತಿಳಿಸಿದರು.

ಔರಂಗಜೇಬನನ್ನು ಎಸ್​​ಪಿ ಶಾಸಕ ಹೊಗಳುವ ಮೂಲಕ ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಅವರ ಪುತ್ರ ಛತ್ರಪತಿ ಸಂಭಾಜಿ ಮಹಾರಾಜ್ ಅವರನ್ನು ಅವಮಾನಿಸಲಾಗಿದೆ ಎಂದು ಆಡಳಿತ ಪಕ್ಷದ ಸದಸ್ಯರು ಸದನದಲ್ಲಿ ಟೀಕಾಪ್ರಹಾರ ನಡೆಸಿದರು.

ಆದ್ರೆ ನನ್ನ ಮಾತುಗಳನ್ನು ತಿರುಚಲಾಗಿದೆ. ಇತಿಹಾಸಕಾರರು ಮತ್ತು ಬರಹಗಾರರು ಹೇಳಿದ್ದನ್ನು ನಾನು ಹೇಳಿದ್ದೇನೆ. ನಾನು ಛತ್ರಪತಿ ಶಿವಾಜಿ ಮಹಾರಾಜ್, ಸಂಭಾಜಿ ಮಹಾರಾಜ್ ಅಥವಾ ಇತರ ಯಾವುದೇ ಮಹಾನ್ ವ್ಯಕ್ತಿಗಳ ಬಗ್ಗೆ ಯಾವುದೇ ಅವಹೇಳನಕಾರಿ ಹೇಳಿಕೆ ನೀಡಿಲ್ಲ . ಆದರೆ ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ, ನಾನು ನನ್ನ ಮಾತುಗಳನ್ನು, ನನ್ನ ಹೇಳಿಕೆಯನ್ನು ಹಿಂಪಡೆಯುತ್ತೇನೆ. ಈ ವಿಷಯವನ್ನು ರಾಜಕೀಯ ವಿಷಯವನ್ನಾಗಿ ಮಾಡಲಾಗುತ್ತಿದೆ ಎಂದು ನಿನ್ನೆ ಸಮಾಜವಾದಿ ಪಕ್ಷದ ಶಾಸಕ ಅಬು ಅಜ್ಮಿ ಹೇಳಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!