ರಾಜ್ಯಸಭೆಗೆ ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್ ಚೌಧರಿ ಕಣಕ್ಕಿಳಿಸಲು ಎಸ್‌ಪಿ ಅಸ್ತು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯಸಭಾ ಚುನಾವಣೆಗೆ ಸಮಾಜವಾದಿ ಪಕ್ಷ ಮತ್ತು ಆರ್‌ಎಲ್‌ಡಿ ಜಂಟಿ ಅಭ್ಯರ್ಥಿಯಾಗಿ ರಾಷ್ಟ್ರೀಯ ಲೋಕದಳ ಮುಖ್ಯಸ್ಥ ಜಯಂತ್ ಚೌಧರಿ ಕಣಕ್ಕಿಳಿಯಲಿದ್ದಾರೆ. ಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಜಯಂತ್ ಚೌಧರಿ ಮೂರನೇ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಾರೆ. ಉತ್ತರ ಪ್ರದೇಶದಲ್ಲಿ, ಆರ್‌ಎಲ್‌ಡಿ ಎಸ್‌ಪಿ ನೇತೃತ್ವದ ಮಿತ್ರಪಕ್ಷವಾಗಿದ್ದು, ಇಂದು ಸ್ವತಃ ಅಖಿಲೇಶ್‌ ಯಾದವ್‌ ಚೌಧರಿಗೆ ಕರೆ ಮಾಡಿ ನೀವು ರಾಜ್ಯಸಭೆಗೆ ಪಕ್ಷದಿಂದ ಅಂತಿಮ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದೀರಿ ಎಂದು ತಿಳಿಸಿದರು.

ಇದಕ್ಕೂ ಮುನ್ನ ನಿನ್ನೆ(ಬುಧವಾರ) ಕಪಿಲ್ ಸಿಬಲ್ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಕಳೆದ ವಾರ ಕಾಂಗ್ರೆಸ್ ತೊರೆದು ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ಸ್ವತಂತ್ರ ಅಭ್ಯರ್ಥಿಯಾಗಿ ಸಿಬಲ್ ಕಣದಲ್ಲಿದ್ದಾರೆ.

15 ರಾಜ್ಯಗಳಲ್ಲಿ 57 ರಾಜ್ಯಸಭಾ ಸ್ಥಾನಗಳಿಗೆ ಜೂನ್ 10 ರಂದು ಚುನಾವಣೆ ನಡೆಯಲಿದೆ. ಗರಿಷ್ಠ ಸಂಖ್ಯೆಯ ಸ್ಥಾನಗಳು ಉತ್ತರ ಪ್ರದೇಶದಲ್ಲಿದ್ದು, 11 ಖಾಲಿ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!