ಸಮಾಜವಾದಿ ಪಕ್ಷದ ನಾಯಕ, ಅತ್ಯಂತ ಹಿರಿಯ ಸಂಸದ ಶಫೀಕರ್ ರಹಮಾನ್ ಬಾರ್ಕ್ ವಿಧಿವಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಮಾಜವಾದಿ ಪಕ್ಷದ ಹಿರಿಯ ನಾಯಕ, ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಸಂಸದ ಶಫೀಕರ್ ರಹಮಾನ್ ಬಾರ್ಕ್ ವಿಧಿವಶರಾಗಿದ್ದಾರೆ.

94 ವರ್ಷ ಪ್ರಾಯದ ಬಾರ್ಕ್, ಕಳೆದ ಕೆಲವು ಸಮಯಗಳಿಂದ ಮೂತ್ರಪಿಂಡದ ಸೋಂಕಿನಿಂದ ಬಳಲುತ್ತಿದ್ದರು. ಅವರಿಗೆ ಮೊರಾದಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಚೌಧರಿ ಚರಣ್ ಸಿಂಗ್ ಅವರೊಂದಿಗೆ ತಮ್ಮ ರಾಜಕೀಯ ಜೀವನ ಆರಂಭಿಸಿದ್ದ ಬಾರ್ಕ್, ಬಾಬರಿ ಮಸೀದಿ ಕ್ರಿಯಾ ಸಮಿತಿಯ ಸಂಯೋಜಕರಾಗಿ ಕೆಲಸ ಮಾಡಿದ್ದರು. ಸಮಾಜವಾದಿ ಪಕ್ಷದ ಸ್ಥಾಪಕ ಸದಸ್ಯರಾಗಿದ್ದ ಅವರು ಒಟ್ಟು ಐದು ಬಾರಿ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ.

ಬಾರ್ಕ್ ನಿಧನಕ್ಕೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಸಹಿತ ಹಲವು ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!