March 7, 2026
Saturday, March 7, 2026
spot_img

ಲೈಂಗಿಕ ಕಿರುಕುಳ ಆರೋಪ: ಸಮಾಜವಾದಿ ಪಕ್ಷದ ರಾಷ್ಟ್ರೀಯ ವಕ್ತಾರ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಲೈಂಗಿಕ ಕಿರುಕುಳ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಸಫ್ದರ್ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಮಾಜವಾದಿ ಪಕ್ಷದ ರಾಷ್ಟ್ರೀಯ ವಕ್ತಾರ ಮನೋಜ್ ಯಾದವ್ ಅವರನ್ನು ಬಂಧಿಸಲಾಗಿದೆ.

ಭಾಗಲೇಪುರ್ವಾ ಗ್ರಾಮದ ಪರಿಶಿಷ್ಟ ಜಾತಿಯ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಯಾದವ್ ವಿರುದ್ಧ ಅತ್ಯಾಚಾರ, ಹಲ್ಲೆ, ಕಿರುಕುಳ ಕೇಸ್ ದಾಖಲಿಸಲಾಗಿತ್ತು.

ಆರೋಪ ಕೇಳಿಬಂದ ಬೆನ್ನಲ್ಲೇ ಲಖನೌನ ಗೋಮತಿ ನಗರದಿಂದ ನಾಪತ್ತೆಯಾಗಿದ್ದ ಯಾದವ್ ಅವರನ್ನು ಶುಕ್ರವಾರ ಬಂಧಿಸಿ, ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ನಿತೀಶ್ ರೈ ಅವರ ಮುಂದೆ ಹಾಜರುಪಡಿಸಲಾಯಿತು.ನ್ಯಾಯಾಲಯ ಆರೋಪಿಯನ್ನು ಏಳು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !