ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಹಾಕುಂಭ ಮೇಳದಲ್ಲಿ ನಡೆದ ಕಾಲ್ತುಳಿತದ ಬಗ್ಗೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ನೀಡಿದ್ದ ಹೇಳಿಕೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿರುಗೇಟು ನೀಡಿದ್ದಾರೆ.
ಮಹಾಕುಂಭದ ಬಗ್ಗೆ ಸಮಾಜವಾದಿ ಪಕ್ಷ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ. ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಸನಾತನ ಕಾರ್ಯಕ್ರಮದ ವಿರುದ್ಧ ಮಾತನಾಡಲು ಕಾಂಗ್ರೆಸ್ ಮತ್ತು ಎಸ್‌ಪಿ ಕೈಜೋಡಿಸಿವೆ ಎಂದು ಟೀಕಿಸಿದ್ದಾರೆ.
ಅಖಿಲೇಶ್ ಯಾದವ್ ತಮ್ಮ ಹೇಳಿಕೆಯಲ್ಲಿ ಉತ್ತರ ಪ್ರದೇಶ ಸರ್ಕಾರ ಕಾಲ್ತುಳಿತದಲ್ಲಿನ ಸಾವಿನ ಸಂಖ್ಯೆಯನ್ನು ಮರೆಮಾಚುತ್ತಿದೆ. ಈ ಪ್ರಕರಣದ ತನಿಖೆಯನ್ನು ಸೇನೆಗೆ ವಹಿಸಬೇಕೆಂದು ಒತ್ತಾಯಿಸಿದ್ದರು.
ಇಂದು ಲೋಕಸಭೆಯಲ್ಲಿ ಮಾತನಾಡಿದ ಅಖಿಲೇಶ್ ಯಾದವ್, ಮಹಾಕುಂಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸಂಭವಿಸಿದ ಸಾವುನೋವುಗಳ ಬಗ್ಗೆ ಪಾರದರ್ಶಕತೆ ತರಬೇಕೆಂದು ಒತ್ತಾಯಿಸಿದರು, ಸಾವುಗಳು, ಗಾಯಗೊಂಡವರ ಚಿಕಿತ್ಸೆ ಮತ್ತು ಕಾರ್ಯಕ್ರಮಕ್ಕೆ ಮಾಡಲಾದ ವ್ಯವಸ್ಥೆಗಳ ಬಗ್ಗೆ ನಿಖರವಾದ ಅಂಕಿಅಂಶಗಳನ್ನು ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದರು.