ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮ್ಮ ದಾಂಪತ್ಯ ಜೀವನದಿಂದ ಹೊರ ಬಂದ ಬಳಿಕ ನಟಿ ಸಮಂತಾ ಹೆಚ್ಚಾಗಿ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದರ ನಡುವೆ ಸಮಂತಾ ಅವರ ಸಂಭಾವನೆ ವಿಚಾರ ಎಲ್ಲರ ಗಮನ ಸೆಳೆಯುತ್ತಿದೆ.
ನಟಿ ಸಮಂತಾ ಅವರು ಒಂದು ಚಿತ್ರಕ್ಕೆ ಪಡೆಯುವ ಸಂಭಾವನೆ ಎಷ್ಟು ಎನ್ನುವ ವಿಷಯ ಹೆಚ್ಚು ಚರ್ಚೆಯಲ್ಲಿದೆ. ಇನ್ನು ಆಕೆ ಈಗ ಸೌತ್ ಇಂಡಿಯಾದ ಅತಿ ಹೆಚ್ಚು ಸಂಭಾವನೆ ಪಡೆಯುತ್ತಿರುವ ಟಾಪ್ 2ನೇ ನಟಿಯಾಗಿದ್ದಾರೆ.
ಈ ಮೂಲಕ ನ್ಯಾಷನಲ್ ಕ್ರಷ್ ರಶ್ಮಿಕಾ, ಪೂಜಾ ಹೆಗ್ಡೆ, ಸಾಯಿ ಪಲ್ಲವಿ, ಕೀರ್ತಿ ಸುರೇಶ್ ಸೇರಿದಂತೆ ಎಲ್ಲಾ ಸೌತ್ ನಟಿಯರನ್ನು ಹಿಂದಿಕ್ಕಿದ್ದಾರೆ.
ಪುಷ್ಪಾ ಚಿತ್ರದ ಮೂಲಕ ಮತ್ತೆ ಸಿನಿರಂಗಕ್ಕೆ ಕಂ ಬ್ಯಾಕ್ ಮಾಡಿದ ಸಮಂತಾ ಸಿಕ್ಕಾಪಟ್ಟೆ ಸಂಭಾವನೆ ಪಡೆಯುತ್ತಾರೆ ಎಂದು ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಸಾಲು ಸಾಲು ಚಿತ್ರಗಳ ಯಶಸ್ಸಿನ ಬೆನ್ನಲ್ಲೇ ನಟಿ ಸಮಂತಾ ತಮ್ಮ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ.
ಇನ್ನು ಈಗ ಹರಿದಾಡುತ್ತಿರುವ ಮಾಹಿತಿ ಪ್ರಕಾರ ಸಮಂತಾ ಒಂದು ಸಿನಿಮಾಕ್ಕೆ ಬರೋಬ್ಬರಿ 3 ಕೋಟಿ ರೂ. ಸಂಭಾವನೆ ಪಡೆಯುತ್ತಾರಂತೆ. ಇವರು ಸೌತ್ ನಟಿಯರಲ್ಲೇ ಅತಿ ಹೆಚ್ಚು ಸಂಭಾವನೆ ಪಡೆಯುತ್ತಾರೆ ಎಂದು ಹೇಳಲಾಗಿದೆ.
ಇನ್ನು ಮೊದಲ ಸ್ಥಾನದಲ್ಲಿ ನಯನತಾರ ಇದ್ದು, ಅವರು ತಮ್ಮ ಒಂದು ಪ್ರಾಜೆಕ್ಟ್ ಗೆ 5-6ಕೋಟಿ ರೂ. ಸಂಭಾವನೆ ಪಡೆಯುತ್ತಾರಂತೆ.