Sunday, June 26, 2022

Latest Posts

‘ಫ್ಯಾಮಿಲಿ ಮ್ಯಾನ್ 2’ ವೆಬ್​​ ಸಿರೀಸ್​ನಲ್ಲಿನ ನಟನೆಗೆ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದ ಸಮಂತಾ!

ಹೊಸ ದಿಗಂತ ಡಿಜಿಟಲ್‌ ಡೆಸ್ಕ್:‌

ಒಟಿಟಿ ಪ್ಲಾಟ್​ಫಾರ್ಮ್​ನಲ್ಲಿ​ ಇತ್ತೀಚೆಗೆ ಬಿಡುಗಡೆಯಾದ ‘ಫ್ಯಾಮಿಲಿ ಮ್ಯಾನ್ 2’ ವೆಬ್​​ ಸಿರೀಸ್​ನಲ್ಲಿ ನಟಿಸಿದ್ದ ಬಹುಭಾಷಾ ನಟಿ ಸಮಂತಾ ಅತ್ಯುತ್ತಮ ನಟಿ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ.
ಮುಂಬೈನಲ್ಲಿ ಗುರುವಾರ ನಡೆದ ಫಿಲ್ಮ್‌ಫೇರ್ ಒಟಿಟಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಫ್ಯಾಮಿಲಿ ಮ್ಯಾನ್ 2’ ವೆಬ್​​ ಸಿರೀಸ್​ ಅತ್ಯುತ್ತಮ ಮೂಲ ಕಥೆ, ಅತ್ಯುತ್ತಮ ಚಿತ್ರಕಥೆ, ಅತ್ಯುತ್ತಮ ನಿರ್ದೇಶನ-ಕ್ರಿಟಿಕ್ಸ್​ (ಸುಪರ್ಣ್​ ವರ್ಮಾ), ಅತ್ಯುತ್ತಮ ನಟಿ (ಸಮಂತಾ), ಅತ್ಯುತ್ತಮ ವೆಬ್​ ಸಿರೀಸ್​ ಪ್ರಶಸ್ತಿಗಳನ್ನು ಬಾಚಿಕೊಂಡಿದೆ.
ಅನೇಕ ವಿವಾದಗಳ ನಡುವೆ ಒಟಿಟಿಯಲ್ಲಿ ಬಿಡುಗಡೆಯಾದ ‘ದಿ ಫ್ಯಾಮಿಲಿ ಮ್ಯಾನ್ 2’ ವೆಬ್ ಸರಣಿಯು ಪ್ರಪಂಚದಾದ್ಯಂತ ಪ್ರೇಕ್ಷಕರಿಂದ ಅಪಾರ ಜನಪ್ರಿಯತೆಯನ್ನು ಗಳಿಸಿದೆ. ಜನಪ್ರಿಯ IMDB TV ಸರಣಿ ಶ್ರೇಯಾಂಕಗಳಲ್ಲಿ ಈ ಸಿರೀಸ್ ನಾಲ್ಕನೇ ಸ್ಥಾನದಲ್ಲಿದೆ. ‘ದಿ ಫ್ಯಾಮಿಲಿ ಮ್ಯಾನ್ ಸೀಸನ್ 2’ ಅನ್ನು ರಾಜ್ ಮತ್ತು ಡಿಕೆ ನಿರ್ದೇಶಿಸಿದ್ದಾರೆ.
ಈ ವೆಬ್​ ಸರಣಿಯಲ್ಲಿ ಸಮಂತಾ ತಮಿಳು ಈಳಂ ಸೈನಿಕ ರಾಜಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಮೆಜಾನ್​ ಪ್ರೈಂ ವಿಡಿಯೋ ಮೂಲಕ ಬಿಡುಗಡೆಯಾದ ಈ ವೆಬ್​ ಸರಣಿಯಲ್ಲಿ ಸಖತ್​ ಬೋಲ್ಡ್​ ಆದಂತಹ ಪಾತ್ರವನ್ನು ಸಮಂತಾ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss