ಸಲಿಂಗ ವಿವಾಹ ಕಾಯ್ದೆ: ರಾಜ್ಯಗಳಿಗೆ ಅಭಿಪ್ರಾಯ ತಿಳಿಸಲು 10 ದಿನಗಳ ಅವಕಾಶ ನೀಡಿದ ಕೇಂದ್ರ ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಸಲಿಂಗ ವಿವಾಹ ಕಾಯ್ದೆಯನ್ನು (Same-Sex Marriage) ಜಾರಿ ತರುವ ಕುರಿತು ಸುಪ್ರೀಂ ಕೋರ್ಟ್​​ನಲ್ಲಿ​ ಚರ್ಚೆ ನಡೆಯುತ್ತಿದ್ದು, ಈ ನಡುವೆ ಕೇಂದ್ರ ಸರ್ಕಾರವು 10 ದಿನಗಳೊಳಗೆ ಸಲಿಂಗ ವಿವಾಹ ಕಾಯ್ದೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ಕೇಂದ್ರ ಕಾನೂನು ಸಚಿವಾಲಯವು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು 10 ದಿನಗಳ ಒಳಗೆ ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸುವಂತೆ ಕೇಳಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿಲುವಿನಲ್ಲಿ ಯಾವುದೇ ವಿಳಂಬವಿಲ್ಲದೆ ಸರಿಯಾದ ನಿರ್ಧಾರ ತೆಗೆದುಕೊಳ್ಳತ್ತದೆ ಎಂದು ಹೇಳಿದೆ.

ಬಳಿಕ ಕೇಂದ್ರ ಸರ್ಕಾರವು ಅಫಿಡವಿಟ್ ಸಲ್ಲಿಸುವ ಮೂಲಕ ನ್ಯಾಯಾಲಯದ ಮುಂದೆ ತನ್ನ ವಿಚಾರಗಳನ್ನು ತಿಳಿಸಲಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈ ವಿಚಾರವಾಗಿ ಸಮಾಲೋಚನೆ ಮಾಡಲು ಮುಕ್ತಾವಾಗಿದೆ ಎಂದು ಕೇಂದ್ರ ನ್ಯಾಯಾಲಯಕ್ಕೆ ಮನವಿ ಮಾಡಿದೆ.

ರಾಜ್ಯಗಳಿಗೆ ಬರೆದ ಪತ್ರದಲ್ಲಿ, “ಮದುವೆ” ಸಂವಿಧಾನದ ಸಮಕಾಲೀನ ಪಟ್ಟಿಯಲ್ಲಿ ನಮೂದು 5ರ ಅಡಿಯಲ್ಲಿ ಬರುತ್ತದೆ, ಕೇಂದ್ರ ಸರ್ಕಾರ ಮತ್ತು ರಾಜ್ಯಗಳು ಎರಡೂ ಸಂಬಂಧಿತ ಸಮಸ್ಯೆಗಳನ್ನು ನಿಯಂತ್ರಿಸಲು ಅನುವು ಮಾಡಿಕೊಡುತ್ತದೆ.ಎಲ್ಲಾ ರಾಜ್ಯ ಸರ್ಕಾರಗಳ ಅಭಿಪ್ರಾಯಗಳನ್ನು ಒಳಗೊಂಡಂತೆ ನ್ಯಾಯಾಲಯದ ಮುಂದೆ ಪ್ರಸ್ತುತಪಡಿಸಲಾಗುವುದು. ಈ ಕಾಯ್ದೆಗೆ ರಾಜ್ಯ ಸರ್ಕಾರಗಳ ಅಭಿಪ್ರಾಯವು ಮುಖ್ಯವಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ರಾಜ್ಯ ಸರ್ಕಾರಗಳಿಗೆ ನೋಟಿಸ್ ನೀಡುವ ಬಗ್ಗೆ ಸುಪ್ರೀಂ ಕೂಡ ಪ್ರಮುಖ ಆದೇಶವನ್ನು ನೀಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!