ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರೀಡಾ ಕ್ಷೇತ್ರದಲ್ಲಿ ಸಲಿಂಗಿ ಜೋಡಿ ವಿವಾಹ ಸಾಮಾನ್ಯವಾಗಿದೆ. ಒಂದು ತಿಂಗಳ ಹಿಂದಷ್ಟೇ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ಡೇನಿಯಲ್ ವ್ಯಾಟ್ ಅವರು ತನ್ನ ಬಹುಕಾಲ ಗೆಳತಿ ಜಾರ್ಜಿ ಹಾಡ್ಜ್ ಅವರೊಂದಿಗೆ ಮದುವೆಯಾಗಿದ್ದರು.
ಇದೀಗ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಮಹಿಳಾ ಸ್ಟಾರ್ ಕ್ರಿಕೆಟಿಗರಿಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಇಂಗ್ಲೆಂಡ್ ತಂಡ ವಿಕೆಟ್ ಕೀಪರ್ ಆಮಿ ಜೋನ್ಸ್ ಮತ್ತು ಆಸ್ಟ್ರೇಲಿಯಾದ ಕ್ರಿಕೆಟ್ ಆಟಗಾರ್ತಿ ಪೈಪಾ ಕ್ಲಿಯರಿ ಸಲಿಂಗಿ ವಿವಾಹವಾಗಲು ಮುಂದಾಗಿದ್ದಾರೆ. ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ನಿಶ್ಚಿತಾರ್ಥದ ಫೋಟೊವನ್ನು ಉಭಯ ಆಟಗಾರ್ತಿಯರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು ನಾವು ಜತೆಯಾಗಿ ಜೀವಿಸಲು ಮೊದಲ ಹೆಜ್ಜೆ ಇಟ್ಟಿದ್ದೇವೆ. ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಬರೆದುಕೊಂಡಿದ್ದಾರೆ.
31 ವರ್ಷದ ಆಮಿ ಜೋನ್ಸ್ 2019 ರಲ್ಲಿ ಇಂಗ್ಲೆಂಡ್ ತಂಡದ ಪರ ಪದಾರ್ಪಣೆ ಮಾಡಿದ್ದರು. ಇದುರೆಗೆ ಇಂಗ್ಲೆಂಡ್ ಪರ 107 ಟಿ20, 91 ಏಕದಿನ ಮತ್ತು 6 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಏಕದಿನದಲ್ಲಿ(1951), ಟಿ20ಯಲ್ಲಿ (1515), ಟೆಸ್ಟ್ನಲ್ಲಿ (116) ರನ್ ಗಳಿಸಿದ್ದಾರೆ. ಆಮಿಯವರು ಮಹಿಳಾ ಬಿಗ್ ಬ್ಯಾಷ್ ಲೀಗ್‌ನಲ್ಲಿ ಪರ್ತ್ ಸ್ಕಾರ್ಚರ್ಸ್‌ಗಾಗಿ ಆಡುತ್ತಿರುವಾಗ 28 ವರ್ಷದ ಆಸ್ಟ್ರೇಲಿಯಾದ ವೇಗಿ ಪೈಪಾ ಕ್ಲಿಯರಿ ಜತೆ ಪ್ರೇಮಾಂಕುರವಾಗಿತ್ತು. ಇದೀಗ ಈ ಜೋಡಿ ಒಂದಾಗಿ ಜೀವನ ನಡೆಸಲು ಸಿದ್ಧರಾಗಿದ್ದಾರೆ.