‘ಮಹಾ’ ಮಾಜಿ ಸಚಿವ ನವಾಬ್‌ ಮಲಿಕ್‌ ವಿರುದ್ಧ ರ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಮೀರ್‌ ವಾಂಖೆಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮಹಾರಾಷ್ಟ್ರದ ಎನ್‌ಸಿಬಿಯ ಮಾಜಿ ನಿರ್ದೇಶಕ ಸಮೀರ್‌ ವಾಂಖೆಡೆ ಅವರು ಮಾಜಿ ಸಚಿವ ನವಾಬ್‌ ಮಲಿಕ್‌ ವಿರುದ್ಧ ಭಾನುವಾರ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಈ ಸಂಬಂಧ ಗೋರೆಗಾಂವ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಮೀರ್‌ ಅವರು ಸರ್ಕಾರಿ ಹುದ್ದೆ ಪಡೆಯುವುದಕ್ಕಾಗಿ ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿದ್ದರು ಎಂದು ಮಲಿಕ್‌ ಆರೋಪಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ್ದ ಮುಂಬೈ ಜಿಲ್ಲಾ ಜಾತಿ ‍ಪ್ರಮಾಣಪತ್ರ ಪರಿಶೀಲನಾ ಸಮಿತಿಯು ಸಮೀರ್‌ ಸಲ್ಲಿಸಿರುವ ಪ್ರಮಾಣಪತ್ರ ನಕಲಿಯಲ್ಲ ಎಂದು ಶುಕ್ರವಾರ ಹೇಳಿತ್ತು.
‘ತಾವು ನಿರ್ದೋಷಿ ಎಂಬುದು ಸಾಬೀತಾದ ಬೆನ್ನಲ್ಲೇ ಗೋರೆಗಾಂವ್‌ ಪೊಲೀಸ್‌ ಠಾಣೆಗೆ ಭೇಟಿ ನೀಡಿದ್ದ ಸಮೀರ್‌, ಮಲಿಕ್‌ ವಿರುದ್ಧ ದೂರು ನೀಡಿದ್ದಾರೆ. ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!