ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಸಭಾ ಸದಸ್ಯ ಮತ್ತು ಬಿಜೆಪಿ ಪಶ್ಚಿಮ ಬಂಗಾಳ ಘಟಕದ ಮುಖ್ಯ ವಕ್ತಾರ ಸಮಿಕ್ ಭಟ್ಟಾಚಾರ್ಯ ಅವರು ಬುಧವಾರ ನೂತನ ರಾಜ್ಯಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಗೆ ಸಮಿಕ್ ಭಟ್ಟಾಚಾರ್ಯ ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಸಾಂಸ್ಥಿಕ ಚುನಾವಣಾ ಪ್ರಕ್ರಿಯೆಯಲ್ಲಿ ಬೇರೆ ಯಾರೂ ನಾಮಪತ್ರ ಸಲ್ಲಿಸಿಲ್ಲ. ಹೀಗಾಗಿ ಭಟ್ಟಾಚಾರ್ಯ ಅವರು ಅವಿರೋಧವಾಗಿ ಆಯ್ಕೆಯಾಗಿದೆ.
ಹಾಲಿ ಬಿಜೆಪಿ ಅಧ್ಯಕ್ಷರಾಗಿರುವ ಉತ್ತರ ಬಂಗಾಳದ ಬಲೂರ್ಘಾಟ್ ಲೋಕಸಭಾ ಸದಸ್ಯ ಮತ್ತು ಕೇಂದ್ರ ಸಚಿವರಾದ 45 ವರ್ಷದ ಸುಕಾಂತ ಮಜುಂದಾರ್ ಅವರ ಸ್ಥಾನವನ್ನು ಭಟ್ಟಾಚಾರ್ಯ ಅಲಂಕರಿಸಲಿದ್ದಾರೆ.