ಹೊಸದಿಗಂತ ಡಿಜಿಟಲ್ ಡೆಸ್ಕ್;
ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಗುಡ್ಡ ಕ್ಷೇತ್ರಕ್ಕೆ ಭೇಟಿ ನೀಡಿರುವ ಸಿಎಂ ಸಿದ್ದರಾಮಯ್ಯ , ಸವದತ್ತಿ ಯಲ್ಲಮ್ಮ ದೇವಾಲಯಕ್ಕೆ ತಿರುಪತಿ, ಧರ್ಮಸ್ಥಳ ಮಾದರಿ ಸೌಲಭ್ಯ ಒದಗಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ಸುದ್ದಿಗಾರರೊದಿಗೆ ಮಾತನಾಡಿದ ಅವರು, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗೆ ಆಗಮಿಸಿದ್ದೆ. ಯಲ್ಲಮ್ಮ ದೇವಸ್ಥಾನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಅವರಿಗೆ ಮೂಲಭೂತ ಸೌಲಭ್ಯ ವ್ಯವಸ್ಥೆ ಮಾಡಲಾಗುವುದು. ವಿಶೇಷವಾಗಿ ತಿರುಪತಿ, ಧರ್ಮಸ್ಥಳ ಮಾದರಿ ಸೌಲಭ್ಯ ಒದಗಿಸಲಾಗುವುದು ಎಂದು ಹೇಳಿದರು.
ವಿಶೇಷವಾಗಿ ಹುಣ್ಣಿಮೆ ದಿನದಂದು ಯಲ್ಲಮ್ಮ ಗುಡ್ಡಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಬರುವ ಭಕ್ತರಿಗೆ ಸೌಲಭ್ಯ ಒದಗಿಸಬೇಕು. ಬಂಡಿಯಲ್ಲಿ ಬರುವವರಿಗೆ ಎತ್ತುಗಳಿಗೆ ಮೇವುಗಳನ್ನು ಕೊಡುತ್ತೇವೆ. ಯಲ್ಲಮ್ಮ ಕ್ಷೇತ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.