April 15, 2026
Wednesday, April 15, 2026
spot_img

ಬಿಹಾರಕ್ಕೆ ಮೊದಲ ಬಿಜೆಪಿ ಮುಖ್ಯಮಂತ್ರಿ: ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರದ ರಾಜಕೀಯದಲ್ಲಿ ಐತಿಹಾಸಿಕ ಟ್ವಿಸ್ಟ್ ಸಿಕ್ಕಿದೆ. ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಅವರು ಇಂದು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ದೀರ್ಘಕಾಲ ರಾಜ್ಯವನ್ನು ಮುನ್ನಡೆಸಿದ ನಿತೀಶ್ ಕುಮಾರ್ ಅವರ ರಾಜೀನಾಮೆಯ ಬಳಿಕ ಈ ಬದಲಾವಣೆ ನಡೆದಿದೆ. ಬಿಹಾರದಲ್ಲಿ ಬಿಜೆಪಿ ಪಕ್ಷದ ಮೊದಲ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಅಧಿಕಾರ ಸ್ವೀಕರಿಸಿರುವುದು ವಿಶೇಷ ಮಹತ್ವ ಪಡೆದುಕೊಂಡಿದೆ.

ಪಾಟ್ನಾದ ಲೋಕಭವನ್‌ನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸಯ್ಯದ್ ಅತಾ ಹಸ್ನೈನ್ ಅವರು ಪ್ರಮಾಣವಚನ ಬೋಧಿಸಿದರು. ಇದೇ ವೇಳೆ ಜೆಡಿಯು ನಾಯಕರು ವಿಜಯ್ ಕುಮಾರ್ ಚೌಧರಿ ಹಾಗೂ ಬಿಜೇಂದ್ರ ಪ್ರಸಾದ್ ಯಾದವ್ ಸಚಿವ ಸಂಪುಟ ಸದಸ್ಯರಾಗಿ ಅಧಿಕಾರ ಸ್ವೀಕರಿಸಿದರು.

ಎನ್‌ಡಿಎ ಮೈತ್ರಿಯ ಪ್ರಮುಖ ನಾಯಕರು, ಬಿಜೆಪಿ ಹಿರಿಯರು ಮತ್ತು ಹಲವು ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

1990ರ ದಶಕದಿಂದ ರಾಜಕೀಯದಲ್ಲಿ ಸಕ್ರಿಯರಾಗಿರುವ ಸಾಮ್ರಾಟ್ ಚೌಧರಿ, ಆರ್‌ಜೆಡಿ ಮತ್ತು ಜೆಡಿಯು ಪಕ್ಷಗಳಲ್ಲಿ ಸೇವೆ ಸಲ್ಲಿಸಿದ ನಂತರ ಬಿಜೆಪಿಯಲ್ಲಿ ಪ್ರಮುಖ ಮುಖವಾಗಿ ಬೆಳೆದರು. ಉಪ ಮುಖ್ಯಮಂತ್ರಿ ಸ್ಥಾನದಿಂದ ಈಗ ಮುಖ್ಯಮಂತ್ರಿಯಾಗಿ ಏರಿರುವುದು ಅವರ ರಾಜಕೀಯ ಜೀವನದ ದೊಡ್ಡ ಮೈಲಿಗಲ್ಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !