ಹೊಸದಿಗಂತ ಡಿಜಿಟಲ್ ಡೆಸ್ಕ್:
ಸನಾತನ ಧರ್ಮ ಭಾರತದ ರಾಷ್ಟ್ರೀಯ ಧರ್ಮ. ಅದು ಮಾನವೀಯತೆಯ ಧರ್ಮ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಮಾತಾಡಿದ ಅವರು, ಸನಾತನ ಧರ್ಮದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸನಾತನ ಧರ್ಮ ಭಾರತದ ರಾಷ್ಟ್ರೀಯ ಧರ್ಮವಾಗಿದೆ. ಮಹಾ ಕುಂಭಮೇಳವು ಸನಾತನ ಧರ್ಮದ ಭಾಗವಾಗಿದೆ ಎಂದು ಹೇಳಿದ್ದಾರೆ.
ಮಹಾ ಕುಂಭಮೇಳ, ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಬೃಹತ್ ಧಾರ್ಮಿಕ ಕಾರ್ಯಕ್ರಮವಾಗಿದೆ. ಯಾವುದೇ ಒಂದು ಜಾತಿ ಅಥವಾ ಧರ್ಮಕ್ಕೆ ಮೀಸಲಾಗಿಲ್ಲ. ಇದು ಎಲ್ಲಾ ಧರ್ಮ, ಸಂಸ್ಕೃತಿ ಮತ್ತು ಪಂಥದ ಮಹಾನ್ ಸಮ್ಮಿಲನವಾಗಿದೆ ಎಂದು ಹೇಳಿದರು.
ಮಹಾ ಕುಂಭದಲ್ಲಿ ಯಾವುದೇ ತಾರತಮ್ಯವಿಲ್ಲ. ಸನಾತನ ಧರ್ಮವನ್ನು ಟೀಕಿಸುತ್ತಿದ್ದ ಜನರು, ಇದನ್ನು ನೋಡಬೇಕು. ಸುಮ್ಮನೇ ಧೃತರಾಷ್ಟ್ರನಾಗಬೇಡಿ ಎಂದಿದ್ದಾರೆ.