ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ, ತೆಲಂಗಾಣ ಕಾಂಗ್ರೆಸ್ ಗೆಲವು ಬಹುತೇಕ ಪಕ್ಕಾವಾಗಿದೆ. ಇತ್ತ ಕಾಂಗ್ರೆಸ್ ಸೋಲು ಕುರಿತು ಆ ನೇಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದೀಗ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಕೂಡ ಹೇಳಿಕೆ ನೀಡಿದ್ದಾರೆ.
ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವವೆಂಕಟೇಶ್ ಪ್ರಸಾದ್, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ಸನಾತನ ಸಂಸ್ಥೆಯ ಮೇಲಿನ ದಾಳಿಯ ಹಣೆಬರಹವಿದು’ ಎಂದು ಎಕ್ಸ್ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ಮಿತ್ರ ಪಕ್ಷ ಉದಯನಿಧಿ ಸ್ಟಾಲಿನ್ ಅವರ ಸನಾತನ ನಿರ್ಮೂಲನೆ ಹೇಳಿಕೆಯಿಂದ ಉಂಟಾದ ಧರ್ಮದ ಗಲಾಟೆಯೇ ಕಾಂಗ್ರೆಸ್‌ನ ಸೋಲಿಗೆ ಕಾರಣ ಎಂದು ಅವರು ಹೇಳಿದ್ದಾರೆ. ಜತೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರ ನಾಯಕತ್ವವನ್ನು ಶ್ಲಾಘಿಸಿದ್ದಾರೆ.