ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ಲೈನ್ ಡೆಸ್ಕ್:
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್ ಮೃತಪಟ್ಟಿದ್ದು, ಡಿಸಿಎಂ ಅಶ್ವತ್ಧ ನಾರಾಯಣ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮೂಲಕ ಕಂಬನಿ ಮಿಡಿದ ಅವರು, ಸಂಚಾರಿ ವಿಜಯ್ ಅವರು ಚಿಕಿತ್ಸೆ ಫಲಕಾರಿಯಾಗದೆ ನಮ್ಮನ್ನು ಅಗಲಿದ್ದಾರೆ ಎಂದು ತಿಳಿದು ಮನಸ್ಸಿಗೆ ಅತೀವ ಘಾಸಿಯಾಗಿದೆ. ಪ್ರತಿಭಾವಂತ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದನನ್ನು ನಾವು ಕಳೆದುಕೊಂಡಿದ್ದೇವೆ.ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದಿದ್ದಾರೆ.
ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಚಾರಿ ವಿಜಯ್ ಅವರ ಚಿಕಿತ್ಸಾ ವೆಚ್ಚವನ್ನು ಡಿಸಿಎಂ ಅಶ್ವತ್ಥನಾರಾಯಣ ಭರಿಸುವಂತೆ ತಿಳಿಸಿದ್ದರು.