ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಸಂಚಾರಿ ವಿಜಯ್ ಅವರ ಆರೋಗ್ಯದ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ.
ವಿಜಯ್ ಅವರ ಆರೋಗ್ಯ ಸ್ಥಿತಿ ಕ್ಷಣಕ್ಷಣಕ್ಕೂ ಕ್ಷೀಣಿಸುತ್ತಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ. ಕುಟುಂಬಸ್ಥರು ಆಸ್ಪತ್ರೆಯಲ್ಲಿಯೇ ಇದ್ದಾರೆ. ರಿಕವರ್ ಆಗುವ ಚಾನ್ಸಸ್ ಕಡಿಮೆ ಎಂದು ನ್ಯೂರೋ ಸರ್ಜನ್ ಡಾ. ಅರುಣ್ ನಾಯಕ್ ತಿಳಿಸಿದ್ದಾರೆ.
ಮೆದುಳಿನ ಭಾಗಕ್ಕೆ ಗಂಭೀರವಾದ ಹೊಡೆತ ಬಿದ್ದಿದೆ. ಇದರಿಂದಾಗಿ ರಕ್ತಸ್ರಾವವಾಗಿದ್ದು, ಐಸಿಯುದಲ್ಲಿ ಲೈಫ್ ಸಪೋರ್ಟ್ನಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದಿದ್ದಾರೆ.