ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್‌ನ ರಾಷ್ಟ್ರೀಯ ಹೆದ್ದಾರಿಯ ರಸ್ತೆಬದಿಯಲ್ಲಿ ಕೆಲಸ ಮಾಡುತ್ತಿದ್ದಾಗ ಮರಳು ತುಂಬಿದ ಟ್ರಕ್ ಪಲ್ಟಿಯಾಗಿ ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ. ಟ್ರಕ್ ಚಾಲಕ ಕಿರಿದಾದ ತಿರುವು ಮೂಲಕ ಚಲಿಸಲು ಪ್ರಯತ್ನಿಸಿದ್ದರಿಂದ ವಾಹನ ಪಲ್ಟಿಯಾಗಿದೆ ಎಂದು ಹೇಳಲಾಗಿದೆ.
ಮೃತರೆಲ್ಲರೂ ದಾಹೋದ್ ಜಿಲ್ಲೆಯವರು ಮತ್ತು ಕೆಲಸಕ್ಕಾಗಿ ಆ ಪ್ರದೇಶಕ್ಕೆ ಬಂದಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.