ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಧಿಕಾರಿಗಳ ವರ್ಗಾವಣೆ ಮತ್ತು ಮರಳು ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರ ಸೋದರಳಿಯ ಭೂಪಿಂದರ್ ಸಿಂಗ್ ತಪ್ಪು ಒಪ್ಪಿಕೊಂಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.
10 ಕೋಟಿ ರೂ. ನಗದು ಪಡೆದದ್ದು, ಮರಳು ಗಣಿಗಾರಿಕೆಗೆ ಅನುಕೂಲವಾಗುವಂತೆ ಮತ್ತು ಅಧಿಕಾರಿಗಳ ಪೋಸ್ಟಿಂಗ್ ಬದಲಿಗೆ ನೆರವು ನೀಡಲು ಪ್ರತಿಯಾಗಿ ಹಣ ಸ್ವೀಕರಿಸಿದ್ದನ್ನು ಒಪ್ಪಿಕೊಂಡಿದ್ದಾರೆ ಎಂದು ಇಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪಂಜಾಬ್‌ನಲ್ಲಿ ಮರಳು ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಹಣ ವರ್ಗಾವಣೆ ಪ್ರಕರಣವನ್ನು ಜಾರಿ ನಿರ್ದೇಶನಾಲಯ ದಾಖಲಿಸಿತ್ತು. ಜಲಂಧರ್‌ನಲ್ಲಿ ದಾಳಿ ನಡೆಸಿ ಫೆ.3 ರಂದು ಭೂಪಿಂದರ್ ಸಿಂಗ್‌ರನ್ನು ಬಂಧಿಸಿತ್ತು.