ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಲಬುರಗಿ ಜಿಲ್ಲೆ ನೇಗಿಲು ಠಾಣೆಯ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ತಡೆಯಲು ತೆರಳಿದ್ದಂತ ಹೆಡ್ ಕಾನ್ ಸ್ಟೇಬಲ್ ಮೇಲೆ ಟ್ರ್ಯಾಕ್ಟರ್ ಹರಿಸಲಾಗಿತ್ತು. ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ, ಹೆಡ್ ಕಾನ್ಸ್ ಸ್ಟೇಬಲ್ ಸಾವನ್ನಪ್ಪಿದ್ದು, ಈ ಪ್ರಕರಣ ಸಂಬಂಧ ಇಂದು ಪ್ರಮುಖ ಆರೋಪಿ ಕಾಲಿಗೆ ಗುಂಡೇಟು ನೀಡಿ, ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣ ಪ್ರಮುಖ ಆರೋಪಿ ಸಾಯಿಬಣ್ಣ ತಲೆ ಮರೆಸಿಕೊಂಡಿದ್ದನು. ವಿಜಯಪುರ ಜಿಲ್ಲೆಯ ಆಲಮೇಲ ಬಳಿಯಲ್ಲಿ ಆರೋಪಿ ಸಾಯಿಬಣ್ಣ ಇರುವ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಬಂಧಿಸಿದ್ದರು. ಬಂಧಿತ ಆರೋಪಿ ಸಾಯಿಬಣ್ಣನನ್ನು ಕರೆತರುವಾಗ, ಮಾರ್ಗ ಮಧ್ಯೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದನು.
ಪೊಲೀಸರ ಮೇಲೆ ಹಲ್ಲೆ ಮಾಡಿ, ಯತ್ನಿಸಿ ಪರಾರಿಯಾಗಲು ಪ್ರಯತ್ನಿಸಿದಂತ ಆರೋಪಿ ಸಾಯಿಬಣ್ಣನ ಕಾಲಿನ ಮೇಲೆ ಆತ್ಮರಕ್ಷಣೆಗಾಗಿ ಪಿಎಸ್‌ಐ ಕಾಲಿಗೆ ಗುಂಡೇಟು ನೀಡಿ ಬಂಧಿಸಿದ್ದಾರೆ. ಗುಂಡೇಟು ತಿಂದು ಗಾಯಗೊಂಡಿರುವಂತ ಆರೋಪಿ ಸಾಯಿಬಣ್ಣನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ಘಟನೆ ಸಂಬಂಧ ಟ್ರ್ಯಾಕ್ಟರ್ ಚಾಲಕ ಸಿದ್ದಪ್ಪ ಕರ್ಜಗಿ ಎಂಬಾತನನ್ನು ಅಂದೇ ನೆಲೋಗಿ ಠಾಣೆಯ ಪೊಲೀಸರು ಬಂಧಿಸಿದ್ದರು.