ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀಗಂಧದ ಮರ ಕದಿಯಲು ಯತ್ನಿಸಿದ ಕಳ್ಳನ ಮೇಲೆ ಫೈರಿಂಗ್ ನಡೆದಿದೆ. ಇದರಿಂದ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಿನ್ನೆ ತಡರಾತ್ರಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಅರಣ್ಯ ಪ್ರದೇಶದ ಕಲ್ಕೆರೆ ಬಳಿ ಈ ಘಟನೆ ಸಂಭವಿಸಿದೆ. ಹಲವು ದಿನಗಳಿಂದ ಅರಣ್ಯದಲ್ಲಿ ಶ್ರೀಗಂಧದ ಮರಗಳು ಕಳುವಾಗುತ್ತಿದ್ದವು. ಇದರ ಹಿನ್ನೆಲೆಯಲ್ಲಿ ಅರಣ್ಯದಲ್ಲಿ ಫಾರೆಸ್ಟ್ ಬೀಟ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.
ನಿನ್ನೆ ರಾತ್ರಿ ರೌಂಡ್ಸ್ನಲ್ಲಿದ್ದ ಫಾರೆಸ್ಟ್ ಗಾರ್ಡ್ಗಳಿಗೆ ಮರ ಕಡಿಯುವ ಶಬ್ದ ಕೇಳಿಬಂದಿದೆ. ಕೂಡಲೇ ಎಚ್ಚೆತ್ತು ಫಾರೆಸ್ಟ್ ಗಾರ್ಡ್ಗಳು ಶರಣಾಗುವಂತೆ ವಾರ್ನಿಂಗ್ ನೀಡಿದ್ದಾರೆ. ಶರಣಾಗದೆ ಪರಾರಿಯಾಗಲು ಯತ್ನಿಸಿದಾಗ ಫಾರೆಸ್ಟ್ಗಾರ್ಡ್ ವಿನಯ್ ಫೈರಿಂಗ್ ಮಾಡಿದ್ದಾರೆ. ಇದರಿಂದ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊರ್ವ ಪರಾರಿಯಾಗಿದ್ದಾನೆ.
ಮೃತ ಕಳ್ಳ ಕೋಲಾರ ಜಿಲ್ಲೆ ಮಾಲೂರು ಮೂಲದ ನಿವಾಸಿಯಾಗಿದ್ದಾನೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್.ಪಿ. ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.