ಹೊಸ ದಿಗಂತ ಡಿಜಿಟಲ್ ಡೆಸ್ಕ್
ಭೂತಕೋಲ ಹಿಂದು ಸಂಸ್ಕೃತಿಯಲ್ಲ ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿರುವ ಸ್ಯಾಂಡಲ್ ವುಡ್ ನಟ ಚೇತನ್ ವಿರುದ್ಧ ದೂರು ದಾಖಲಾಗಿದೆ.
ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ನಟ ಚೇತನ್ ವಿರುದ್ಧ ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಚೇತನ್ ಹೇಳಿಕೆಯಿಂದ ಹಿಂದೂ ಧರ್ಮದ ನಂಬಿಕೆಗೆ ದಕ್ಕೆ ಉಂಟಾಗಿದ್ದು, ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆಯು ಉಡುಪಿಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ.