ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಮತ್ತು ಧನ್ಯತಾ ನಿಶ್ಚಿತಾರ್ಥ ಕಾರ್ಯಕ್ರಮ ಇಂದು ನೆರವೇರಿದೆ.
ಅರಸಿಕೆರೆ ತಾಲೂಕು ಕಾಳೇನಹಳ್ಳಿಯಲ್ಲಿರುವ ಧನಂಜಯ್ ನಿವಾಸದಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿದೆ. ಫೆ.16 ರಂದು ಮೈಸೂರಿನಲ್ಲಿ ಮದುವೆ ಕಾರ್ಯಕ್ರಮ ನಡೆಯಲಿದೆ.
ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಡಾಲಿ ತಮ್ಮ ಬಾಳಸಂಗಾತಿಯನ್ನು ಪರಿಚಯಿಸಿದ್ದರು. ಧನ್ಯತಾ ಜೊತೆಗಿನ ಸುಂದರವಾದ ವಿಡಿಯೋ ಹಂಚಿಕೊಳ್ಳುವ ಮೂಲಕ ಮದುವೆ ಸುದ್ದಿಯನ್ನು ಹಂಚಿಕೊಂಡಿದ್ದರು.