ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಸ್ಯಾಂಡಲ್ವುಡ್ ಮೇಷ್ಟ್ರು ಹಾಗೂ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಇಂದು ಕೊರೋನಾ ಲಸಿಕೆ ಪಡೆದುಕೊಂಡಿದ್ದು, ಈ ವೇಳೆ ಎಲ್ಲರೂ ವ್ಯಾಕ್ಸಿನ್ ಪಡೆಯಿರಿ ಎಂದು ಜಾಗೃತಿ ಮೂಡಿಸಿದ್ದಾರೆ.
ವ್ಯಾಕ್ಸಿನ್ ಕುರಿತು ಅರಿವು ಮೂಡಿಸಿದ ನಾಗತಿಹಳ್ಳಿ ಚಂದ್ರಶೇಖರ್ ಜಯನಗರ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಲಸಿಕೆ ಪಡೆದರು.
ಸರ್ಕಾರ ನೀಡುತ್ತಿರುವ ಸೌಲಭ್ಯವನ್ನು ಪ್ರತಿಯೊಬ್ಬ ಹಿರಿಯ ನಾಗರಿಕರು ಯಾವುದೇ ಭಯವಿಲ್ಲದೆ ಪಡೆಯಿರಿ ಎಂದು ಜನರಲ್ಲಿ ಜಾಗೃತಿ ಮೂಡಿಸುವ ಮಾತುಗಳನ್ನಾಡಿದ್ದಾರೆ.
ಈಗಾಗಲೇ ಅನೇಕ ಮಂದಿ ಕಲಾವಿದರು ಕೊರೋನಾ ಕುರಿತು ಜಾಗೃತಿ ಮೂಡಿಸಿದ್ದಾರೆ.