ಸ್ಯಾಂಡಲ್‌ವುಡ್ ನಿರ್ಮಾಪಕ ಎಂ.ಎನ್ ಕುಮಾರ್ ಅರೆಸ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚೆಕ್‌ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ಮಾಪಕ ಎಂ.ಎನ್ ಕುಮಾರ್ ಅವರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.

ಕನ್ನಡದ ಮಾಣಿಕ್ಯ, ಅಂಜನಿಪುತ್ರ, ಕಿರಿಕ್ ಶಂಕರ, ಮುಕುಂದ ಮುರಾರಿ, ಶಂಕರಗುರು, ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಿಸಿರುವ ಎಂ.ಎನ್ ಕುಮಾರ್ ಅವರನ್ನು ಕೋರ್ಟ್ ಸೂಚನೆ ಮೇರೆಗೆ ಬುಧವಾರ ತಡರಾತ್ರಿ 2ಗಂಟೆ ಸುಮಾರಿಗೆ ಹಾಸನದಲ್ಲಿ ಬಂಧಿಸಿದ್ದಾರೆ.

1.25 ಕೋಟಿ ರೂ. ವಂಚಿಸಿರುವ ವಿಚಾರವಾಗಿ ಕೇಸ್ ದಾಖಲಾಗಿದ್ದು, ಸದ್ಯ ಎಂಎನ್ ಕುಮಾರ್ ಅವರನ್ನು ಮೆಡಿಕಲ್ ಟೆಸ್ಟ್‌ಗೆ ಕರೆದುಕೊಂಡು ಹೋಗಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!