ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಕೇಸ್‌ಲ್ಲಿ ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಸಾಫ್ಟ್ ಕಾರ್ನರ್ ತೋರಿಸಿದ್ದಾರೆ.
“ನಟ ದರ್ಶನ್ ಜೊತೆ ನಾನು ಸಿನಿಮಾ ಮಾಡಿದ್ದೇನೆ. ಸಿನಿಮಾ ಶೂಟಿಂಗ್ ವೇಳೆ ತಾವು ನಡೆದುಕೊಂಡು ಬಂದ ಹಾದಿ ಬಗ್ಗೆ ನನ್ನ ಬಳಿ ಹಂಚಿಕೊಂಡಿದ್ದರು. ನನಗೆ ಹೆಮ್ಮೆ ಅನಿಸಿತ್ತು. ಲೈಟ್ ಬಾಯ್ ಆಗಿ ಕೆಲಸ ಮಾಡಿ ಈ ಮಟ್ಟಕ್ಕೆ ಬೆಳೆದಿದ್ದಾರೆ. ಆದರೆ ಇತ್ತೀಚಿಗೆ ಅವರ ನಡವಳಿಕೆಯಿಂದ ತುಂಬಾ ಬೇಜಾರಾಗಿತ್ತು. ಎಲ್ಲೋ ಒಂದು ಕಡೆ ಅವರು ತಮ್ಮ ಜೀವನ ಹಾಳು ಮಾಡಿಕೊಂಡರು. ಈ ಮಟ್ಟಕ್ಕೆ ಬೆಳೆದ ಮೇಲೆ ಜವಾಬ್ದಾರಿ ಇರುತ್ತದೆ. ಅವರ ಅಕ್ಕಪಕ್ಕ ಯಾರು ಒಳ್ಳೆಯವರಿಲ್ಲ ಅನಿಸುತ್ತೆ ಗೊತ್ತಿಲ್ಲ. ತಮ್ಮ ಸುತ್ತಮುತ್ತ ಒಳ್ಳೆಯವರನ್ನು ಇಟ್ಟುಕೊಂಡು ಒಳ್ಳೆಯ ದಾರಿಯಲ್ಲಿ ಕರೆದುಕೊಂಡು ಹೋಗಬಹುದಿತ್ತು. ಮೊದಲು ಅಕ್ಕಪಕ್ಕದವರ ಸಹವಾಸ ಬಿಡಬೇಕು” ಎಂದು ಕಿವಿಮಾತು ನೀಡಿದ್ದಾರೆ.