ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಚಿತ್ರರಂಗದಲ್ಲಿ ಹಲವು ಚಿತ್ರಗಳನ್ನು ನಿರ್ಮಿಸಿರುವ ನಿರ್ಮಾಪಕ ಕೆ. ಪ್ರಭಾಕರ್ ಕೊನೆಯುಸಿರೆಳೆದಿದ್ದಾರೆ. ಇಂದು ಅವರು ಹೃದಯಾಘಾತದಿಂದ ನಿಧನರಾದರು. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.
ಕೆ: ಪ್ರಭಾಕರ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಹಿರಿಯ ನಿರ್ಮಾಪಕರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸಿದ್ದಾರೆ.
ಸ್ಯಾಂಡಲ್ ವುಡ್ ನಲ್ಲಿ ಸಭ್ಯ ನಿರ್ಮಾಪಕ ಎಂದು ಕೆ. ಪ್ರಭಾಕರ್ ಗುರುತಿಸಿಕೊಂಡಿದ್ದಾರೆ. ಹಲವು ಸ್ಟಾರ್ ಕಲಾವಿದರ ಜೊತೆ ಸಿನಿಮಾ ಮಾಡಿದ್ದಾರೆ. ಕಾಶಿನಾಥ್, ಶಿವರಾಜ್ ಕುಮಾರ್, ವಿಷ್ಣುವರ್ಧನ್, ಉಪೇಂದ್ರ, ರಾಧಿಕಾ ಕುಮಾರಸ್ವಾಮಿ ಮುಂತಾದ ಕಲಾವಿದರ ಸಿನಿಮಾಗಳಿಗೆ ಕೆ. ಪ್ರಭಾಕರ್ ಅವರು ಬಂಡವಾಳ ಹೂಡಿದ್ದರು. ಹಲವು ಸಿನಿಮಾಗಳ ಮೂಲಕ ಹೆಸರು ಗಳಿಸಿದ್ದರು.