ಸ್ಯಾಂಡಲ್‌ವುಡ್‌ ‘ಸಿಂಹಪ್ರಿಯ’ ಜೋಡಿ ಮದುವೆ ಡೇಟ್ ಫಿಕ್ಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸ್ಯಾಂಡಲ್‌ವುಡ್‌ನ ‘ಸಿಂಹಪ್ರಿಯ’ ಜೋಡಿ ಹಸೆಮಣೆ ಏರಲು ಸಜ್ಜಾಗಿದ್ದು, ಮದುವೆ ಡೇಟ್ ಕೂಡ ಫಿಕ್ಸ್ ಆಗಿದೆ.

ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಇತ್ತೀಚಿಗೆ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು. ಇದೀಗ ಹೊಸ ವರ್ಷದ ಸಂಭ್ರದಲ್ಲೀರುವ ಅಭಿಮಾನಿಗಳಿಗೆ ಮದುವೆ ಸಿಹಿ ಸುದ್ದಿಯೊಂದನ್ನ ಕೊಟ್ಟಿದ್ದಾರೆ.

ಇಂದು ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿದ್ದ ಜೋಡಿ ಗಣಪತಿ ಸಚ್ಚಿದಾನಂದ ಶ್ರೀಗಳಿಂದ ಆಶೀರ್ವಾದ ಪಡೆದು, ಮದುವೆ ಡೇಟ್ ಸಹ ಅನೌನ್ಸ್ ಮಾಡಿದ್ದಾರೆ.
ಈ ಸಿಹಿ ಸುದ್ದಿಯನ್ನು ಸಂಸದ ಪ್ರತಾಪ್ ಸಿಂಹ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ನಟರಾದ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಅವರ ವಿವಾಹ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಇದೇ ತಿಂಗಳ 26 ರಂದು ನಡೆಯಲಿದೆ ಅನ್ನೋ ಮಾಹಿತಿಯನ್ನ ಬಹಿರಂಗಪಡಿಸಿದ್ದಾರೆ. ಇದೀಗ ಇದೇ ತಿಂಗಳ 26ರಂದು ಅಂದ್ರೆ ಗಣರಾಜ್ಯೋತ್ಸವದಂದು ಹಸೆಮಣೆ ಏರಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!