ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್‌ವುಡ್‌ನಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಒಂದ್ ಕಡೆ ಡಾಲಿ ಹಸೆಮಣೆ ಏರೋಕೆ ರೆಡಿಯಾಗಿದ್ರೆ, ಇನ್ನೊಂದ್ ಕಡೆ ಜಯಮಾಲಾ ಪುತ್ರಿ ಹೊಸ ಬಾಳಿಗೆ ಕಾಲಿಡಲು ರೆಡಿಯಾಗಿದ್ದಾರೆ.
ಸೌಂದರ್ಯ ಜಯಮಾಲಾ ಹಳದಿ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ನಟಿಯರು ಮಿಂಚಿದ್ದಾರೆ. ನಟಿಯ ಹಳದಿ ಶಾಸ್ತ್ರ ಸುಂದರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.
ಫೆ.5ರಂದು ಮೆಹೆಂದಿ ಹಾಗೂ ಹಳದಿ ಶಾಸ್ತ್ರ ನಗರದ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ಅದ್ಧೂರಿಯಾಗಿ ನಡೆದಿದೆ. ವಧು ಸೌಂದರ್ಯ ಹಳದಿ ಬಣ್ಣದ ಉಡುಗೆಯಲ್ಲಿ ಕಂಗೊಳಿಸಿದ್ದಾರೆ.
ಈ ಸಂಭ್ರಮದಲ್ಲಿ ಹಿರಿಯ ನಟಿ ಶ್ರುತಿ, ಮಾಳವಿಕಾ ಅವಿನಾಶ್, ಸುಧಾರಾಣಿ, ಉಮಾಶ್ರೀ, ಪ್ರಮೀಳಾ ಜೋಷಾಯ್, ಗಿರಿಜಾ ಲೋಕೇಶ್, ಹರ್ಷಿಕಾ, ಅನು ಪ್ರಭಾಕರ್, ಪ್ರಿಯಾಂಕಾ ಉಪೇಂದ್ರ, ಭಾರತಿ ವಿಷ್ಣುವರ್ಧನ್, ಹೇಮಾ ಚೌಧರಿ, ಸುಧಾ ನರಸಿಂಹರಾಜು ಮುಂತಾದ ಹಿರಿಯ ನಟಿಯರು ಭಾಗವಹಿಸಿದ್ದಾರೆ. ಎಲ್ಲರೂ ಹಳದಿ ಬಣ್ಣದ ಉಡುಗೆಯಲ್ಲಿ ಮಿಂಚಿದ್ದಾರೆ. ಹಿರಿಯ ನಟಿಯರು ಜಯಮಾಲಾ ಜೊತೆ ಸಖತ್ ಆಗಿ ಡ್ಯಾನ್ಸ್ ಮಾಡಿ ಎಂಜಾಯ್ ಮಾಡಿದ್ದಾರೆ.