ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿಯ ಕಾರ್ಯಕ್ರಮಕ್ಕೆ ಸ್ಯಾಂಡಲ್‌ವುಡ್ ತಾರೆಯರು ಆಗಮಿಸಲಿದ್ದಾರೆ. ಕಲಾ ತಂಡಗಳು ಹಾಗೂ ಸ್ತಬ್ಧಚಿತ್ರಗಳ ಜೊತೆಗೆ ಕನ್ನಡ ಚಿತ್ರರಂಗದ ನಟ-ನಟಿಯರೂ ಮೆರವಣಿಗೆಯಲ್ಲಿ ಸಾಗಲಿದ್ದಾರೆ.
ವಿಶೇಷವಾದ ಅಂಬಾರಿ ಬಸ್‌ಗಳಲ್ಲಿ ಸ್ಯಾಂಡಲ್‌ವುಡ್ ತಾರೆಯರು ಕಾಣಿಸಿಕೊಳ್ಳಲಿದ್ದಾರೆ. ತಮ್ಮ ನೆಚ್ಚಿನ ನಟರನ್ನು ನೋಡಲು ಸಾಕಷ್ಟು ಅಭಿಮಾನಿಗಳು ಆಗಮಿಸುವ ನಿರೀಕ್ಷೆ ಇದೆ. ಕನ್ನಡದ ನಟರಾದ ರವಿಚಂದ್ರನ್, ಕಿಚ್ಚ ಸುದೀಪ್, ದುನಿಯಾ ವಿಜಯ್, ಗಣೇಶ್, ರಿಷಬ್ ಶೆಟ್ಟಿ, ಡಾಲಿ ಧನಂಜಯ್, ರಮೇಶ್ ಅರವಿಂದ್, ವಿನಯ್ ರಾಜ್‌ಕುಮಾರ್ ಹಾಗೂ ಯುವ ರಾಜ್‌ಕುಮಾರ್ ಆಗಮಿಸಲಿದ್ದಾರೆ. ಜೊತೆಗೆ ನಟಿಯರಾದ ರಚಿತಾ ರಾಮ್, ರುಕ್ಮಿಣಿ ವಸಂತ್, ಸಪ್ತಮಿ ಗೌಡ, ಅಮೃತಾ ಅಯ್ಯಂಗಾರ್, ಶೃತಿ, ಜಯಮಾಲಾ ಭಾಗಿಯಾಗಲಿದ್ದಾರೆ.
ಯಶ್, ಶಿವರಾಜ್‌ಕುಮಾರ್ ಹಾಗೂ ಅರ್ಜುನ್ ಸರ್ಜಾ ಅವರಿಗೂ ಆಹ್ವಾನ ತಲುಪಿಸಲಾಗಿದೆ. ಶಿವರಾಜ್‌ಕುಮಾರ್ ಬ್ಯಾಂಕಾಕ್‌ಗೆ ತೆರಳಿದ್ದಾರೆ. ಅರ್ಜುನ್ ಸರ್ಜಾ ತಮ್ಮ ಮಗಳ ಮದುವೆ ಕಾರ್ಯಕ್ರಮದಲ್ಲಿ ಬ್ಯುಸಿಯಾಗಿದ್ದಾರೆ. ಯಶ್ ರಾಮಾಯಣ ಪ್ರಮೋಷನ್ಸ್‌ನಲ್ಲಿ ಬ್ಯುಸಿ ಹಾಗೂ ನಟಿ ರಮ್ಯಾ ದೆಹಲಿಯಲ್ಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.



