ಸ್ಯಾಂಡಲ್‌ವುಡ್‌ನ ಜನಪ್ರಿಯ ಹಾಸ್ಯ ಕಲಾವಿದ ಗಂಡಸಿ ನಾಗರಾಜ್ ಇನ್ನಿಲ್ಲ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಯಾಂಡಲ್‌ವುಡ್‌ನ ಜನಪ್ರಿಯ ಹಾಸ್ಯ ಕಲಾವಿದ, ಕಾಸ್ಟ್ಯೂಮ್ ಡಿಸೈನರ್ ಗಂಡಸಿ ನಾಗರಾಜ್ ನಿಧನರಾಗಿದ್ದಾರೆ.
ಕಳೆದ ಐದು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಗಂಡಸಿ ನಾಗರಾಜ್ ಬಳಲುತ್ತಿದ್ದರು.

ರಂಗಭೂಮಿ ಹಿನ್ನೆಲೆಯವರಾದ ನಾಗರಾಜ್ ಅವರು ನಟನಾಗುವ ಆಸೆಯಿಂದಲೇ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟಿದ್ದರು. ಆದರೆ ಸೂಕ್ತ ಅವಕಾಶಗಳು ದೊರೆಯದೇ ಟೈಲರಿಂಗ್ ಕೆಲಸ ಮಾಡುತ್ತಿದ್ದರು. ತದನಂತರ ಕಾಸ್ಟ್ಯೂಮ್ ಡಿಸೈನರ್ ಆಗಿ ಚಂದನವನಕ್ಕೆ ಕಾಲಿಟ್ಟರು. 40 ವರ್ಷಗಳ ಕಾಲ ವಸ್ತ್ರವಿನ್ಯಾಸಕನಾಗಿ ನಾಗರಾಜ್ ಕಾರ್ಯನಿರ್ವಹಿಸಿದ್ದಾರೆ. ನಟ ಜಗ್ಗೇಶ್ ಅವರ ಆಪ್ತ ವಸ್ತ್ರಾಲಂಕಾರ ಕಲಾವಿದರಾಗಿ ಗುರುತಿಸಿಕೊಂಡಿದ್ದರು.

57 ವರ್ಷದ ಗಂಡಸಿ ನಾಗರಾಜ್ ಅವರ ಆರೋಗ್ಯ ತೀರ ಹದಗೆಟ್ಟಿದ್ದು, ಪದ್ಮನಾಭ ನಗರದ ದೇವೇಗೌಡ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಮಧ್ಯಾಹ್ನ 3:30ಕ್ಕೆ ಬನಶಂಕರಿಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!