ಸಂದೇಶ್​ಖಾಲಿ ಪ್ರಕರಣ: ಪ್ರಧಾನಿ ಮೋದಿ ಭೇಟಿ ಕುರಿತು ಸಂತ್ರಸ್ತರು ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಸಂದೇಶ್​ಖಾಲಿಯ ಸಂತ್ರಸ್ತರನ್ನು ಪ್ರಧಾನಿ ಮೋದಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಪ್ರಧಾನಿ ಮೋದಿ ಭೇಟಿಯ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ ಸಂತ್ರಸ್ತ ಮಹಿಳೆ, ನಮ್ಮನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳನ್ನು ಹೇಳಲು ಬಯಸುತ್ತೇವೆ. ನಾವು ಪ್ರತಿಯೊಬ್ಬ ವ್ಯಕ್ತಿಯ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಪ್ರಧಾನಿ ಬಳಿ ಬಹಿರಂಗವಾಗಿ ಹೇಳಿದ್ದೇವೆ. ನಮ್ಮ ಮಾತುಗಳನ್ನು ಆಲಿಸಿದ ಪ್ರಧಾನಿ ಮೋದಿ ಸಹಾಯ ಮಾಡುವ ಭರವಸೆ ನೀಡಿದ್ದಾರೆ.

ಮಮತಾ ಬ್ಯಾನರ್ಜಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ನಾವು ಮತ ಹಾಕಿ ಗೆಲ್ಲಿಸಿದ್ದೆವು. ಆದರೆ, ಅವರು ನಮ್ಮೊಂದಿಗೆ ಮಾತನಾಡದೆ ಅವಮಾನಿಸಿದ್ದಾರೆ. ರಾಜ್ಯದಲ್ಲಿ ಟಿಎಂಸಿ ಸರ್ಕಾರದ ಮೇಲೆ ನಂಬಿಕೆಯಿಲ್ಲದ ಕಾರಣ ಕೇಂದ್ರದ ಭದ್ರತಾ ಪಡೆಗಳನ್ನು ನಿಯೋಜಿಸುವಂತೆ ಮೋದಿ ಬಳಿ ವಿನಂತಿಸಿದ್ದೇವೆ. ನಮಗೆ ಅವರ ಮೇಲೆ ಭರವಸೆ ಇದೆ. ಟಿಎಂಸಿಯ ನಾಯಕ ಶಹಜಹಾನ್‌ ಶೇಖ್‌ ಮತ್ತು ಆತನ ಬೆಂಬಲಿಗರ ಗುಂಪು ಬಲವಂತವಾಗಿ ಭೂಮಿ ಸ್ವಾಧೀನಪಡಿಸಿಕೊಂಡಿದ್ದಾರೆ. ಇದರೊಟ್ಟಿಗೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!