ಹೊಸದಿಗಂತ ವರದಿ, ಬಳ್ಳಾರಿ:
ಸಂಡೂರು ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು.
ಮಾಜಿ ಸಚಿವರಾದ ಗಾಲಿ ಜನಾರ್ಧನ ರೆಡ್ಡಿ, ಬಿ.ಶ್ರೀರಾಮುಲು, ಮಾಜಿ ಶಾಸಕ ಅನಿಲ್ ಲಾಡ್, ಕೇಂದ್ರ ಮಾಜಿ ಸಚಿವ ಭಗವಂತ ಖೂಬಾ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಿ.ಟಿ.ಪಂಪಾಪತಿ, ರಾಜ್ಯ ಬಿಜೆಪಿ ಕಾರ್ಯದರ್ಶಿ ಕೆ.ಎಸ್.ದಿವಾಕರ್ ಸೇರಿದಂತೆ ವಿವಿಧ ಗಣ್ಯರು ಸಾಕ್ಷಿಯಾದರು. ಇದಕ್ಕೂ ಮುನ್ನ ತೆರೆದ ವಾಹನದಲ್ಲಿ ಪಟ್ಟಣದಲ್ಲಿ ಬೃಹತ್ ರೋಡ್ ಶೋ, ನಡೆಸಿದರು. ಇಡಿ ಸಂಡೂರು ಪಟ್ಟಣ ಸಂಪೂರ್ಣ ಕೇಸರಿಮಯವಾಗಿತ್ತು.