ಹೊಸದಿಗಂತ ಡಿಜಿಟಲ್ ಡೆಸ್ಕ್:
ಬುಧವಾರ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಸಂಡೂರು ಪ್ರಥಮ ದರ್ಜೆ ಕಾಲೇಜಿನಲ್ಲಿ ಮತಗಟ್ಟೆಗಳಿಗೆ ನಿಯೋಜಿಸಿರುವ ಅಧಿಕಾರಿಗಳು, ಸಿಬ್ಬಂದಿಗಳಿಂದ ಮಸ್ಟರಿಂಗ್ ಕಾರ್ಯ ನಡೆದಿದೆ.
ಸಂಡೂರು ಕ್ಷೇತ್ರದಲ್ಲಿ ಒಟ್ಟು 253 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. 304 ಮತಗಟ್ಟೆ ಅಧಿಕಾರಿಗಳು, 304 ಸಹಾಯಕ ಅಧಿಕಾರಿಗಳು, 608 ಮತದಾನ ಸಹಾಯಕ ಸಿಬ್ಬಂದಿಗಳು ಸೇರಿ ಮತಗಟ್ಟೆ ಕೇಂದ್ರಗಳಿಗೆ 1,215 ಅಧಿಕಾರಿಗಳು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಸೂಕ್ಷ್ಮ ಅತಿಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚುವರಿ ಭದ್ರತೆ ನಿಯೋಜನೆ ಮಾಡಲಾಗಿದೆ. ಮತಗಟ್ಟೆಗಳಿಗೆ ತೆರಳಲು ಸಿಬ್ಬಂದಿಗಳಿಗೆ ಬಸ್ ಹಾಗೂ ಕ್ರೂಸರ್ ವಾಹನಗಳ ವ್ಯವಸ್ಥೆ ಮಾಡಲಾಗಿದೆ.