ಸಂಘ ಪರಿವಾರವು ಎಂದಿಗೂ ಮೀಸಲಾತಿಯನ್ನು ವಿರೋಧಿಸಿಲ್ಲ: RSS ಮುಖ್ಯಸ್ಥ ಮೋಹನ್‌ ಭಾಗವತ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌, ಸಂಘ ಪರಿವಾರ ಎಂದಿಗೂ ಮೀಸಲಾತಿಯನ್ನು ವಿರೋಧಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಅಗತ್ಯ ಇರುವವರೆಗೆ ಮೀಸಲಾತಿಯನ್ನು ವಿಸ್ತರಿಸಬೇಕು ಎಂದು ಸಂಘವು ಅಭಿಪ್ರಾಯಪಟ್ಟಿದೆ. ಮೀಸಲಾತಿ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮಾತಿನ ಚಕಮಕಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಭಾಗವತ್ ತಮ್ಮ ಹೇಳಿಕೆ ನೀಡಿದ್ದಾರೆ. ಕಣ್ಣಿಗೆ ಕಾಣದಿದ್ದರೂ ಸಮಾಜದಲ್ಲಿ ತಾರತಮ್ಯವಿದೆ ಎಂದರು.

ಸಮಾಜದಲ್ಲಿ ತಾರತಮ್ಯ ಇರುವವರೆಗೂ ಮೀಸಲಾತಿ ಮುಂದುವರಿಯಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಭಾಗವತ್‌ ಕಳೆದ ವರ್ಷ ನಾಗ್ಪುರದಲ್ಲಿ ಹೇಳಿದ್ದರು. ಆ ಹೇಳಿಕೆಯನ್ನು ಈಗ ಪುನರುಚ್ಛರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!