ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಿತ್ರದ ನಿರ್ಮಾಪಕ ಆನಂದ ಅಪ್ಪುಗೋಳ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.
ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಕೋಆಪರೇಟಿವ್ ಸೊಸೈಟಿ ಬ್ಯಾಂಕ್ ನಲ್ಲಿ 250 ಕೋಟಿ ರೂಪಾಯಿ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಪಿಎಂಎಲ್ ಎ ಕಾಯ್ದೆ ಅಡಿ ಕೇಸ್ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸುತ್ತಿದ್ದ ಇಡಿ ಅಧಿಕಾರಿಗಳು ಇಂದು ಅವರನ್ನು ಬಂಧಿಸಿದ್ದಾರೆ.