ಟೆನಿಸ್ ವೃತ್ತಿ ಬದುಕಿಗೆ ಸಾನಿಯಾ ಮಿರ್ಜಾ ವಿದಾಯ: ಪ್ರಧಾನಿ ಮೋದಿಯಿಂದ ಪ್ರಶಂಸನಾ ಪತ್ರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್ ‌:

ಹೈದರಾಬಾದ್‌ನ ಎಲ್‌ಬಿ ಸ್ಟೇಡಿಯಂನಲ್ಲಿ ವಿದಾಯದ ಪಂದ್ಯ ಆಡುವುದರೊಂದಿಗೆ ಎರಡು ದಶಕಗಳ ಟೆನಿಸ್ ವೃತ್ತಿ ಬದುಕಿಗೆ ವಿದಾಯ ಹೇಳಿದ ಸಾನಿಯಾ ಮಿರ್ಜಾ (Sania Mirza) ಅವರಿಗೆ ಪ್ರಧಾನಿ ನರೇಂದ್ರ ಮೋದಿ ( Prime Minister Narendra Modi) ಅವರು ಅಭಿನಂದನಾ ಪತ್ರವನ್ನು ಬರೆದಿದ್ದಾರೆ .

ಮಾರ್ಚ್ 9 ರಂದು ಸಾನಿಯಾ ಮಿರ್ಜಾ ಅವರ ಸಾಧನೆಗೆ ದೇಶದ ಪರವಾಗಿ ಅಭಿನಂದನಾ ಪತ್ರವನ್ನು ಬರೆದಿದ್ದರು. ಇದೀಗ ಪ್ರಧಾನಿ ಅವರ ಅಭಿನಂದನಾ ಪತ್ರವನ್ನು ತಮ್ಮ ಟ್ವಿಟರ್ (Twitter) ಖಾತೆಯಲ್ಲಿ ಹಂಚಿಕೊಂಡಿರುವ ಸಾನಿಯಾ ಮಿರ್ಜಾ, ಪ್ರಧಾನಿ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

‘ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ನನ್ನ ಕೃತಜ್ಞತೆಗಳು. ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ನಮ್ಮ ದೇಶವನ್ನು ಪ್ರತಿನಿಧಿಸುವಲ್ಲಿ ನಾನು ಯಾವಾಗಲೂ ಹೆಮ್ಮೆಪಡುತ್ತೇನೆ. ಮತ್ತು ನಮ್ಮ ದೇಶವನ್ನು ಹೆಮ್ಮೆ ಪಡಿಸಲು ನಾನು ನನ್ನ ಕೈಲಾದಷ್ಟು ಮಾಡುವುದನ್ನು ಮುಂದುವರಿಸುತ್ತೇನೆ. ನಿಮ್ಮ ಬೆಂಬಲಕ್ಕೆ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ.

ಚಾಂಪಿಯನ್ ಸಾನಿಯಾ ಎಂಬ ಹೊಗಳಿಕೆಯ ಮಾತಿನೊಂದಿಗೆ ಅಭಿನಂದನಾ ಪತ್ರವನ್ನು ಆರಂಭಿಸಿರುವ ಮೋದಿ, ಇಡೀ ಪತ್ರದಲ್ಲಿ ಸಾನಿಯಾ ಅವರ ಸಾಧನೆಯನ್ನು ಕೊಂಡಾಡಿದ್ದಾರೆ. ಹಾಗೆಯೇ ಭಾರತದ ಟೆನಿಸ್​ಗೆ ಸಾನಿಯಾ ಅವರ ಕೊಡುಗೆಯನ್ನು ಶ್ಲಾಘಿಸಿದ್ದಾರೆ. ಸಾನಿಯಾ ಅವರ ತಂದೆ ತಾಯಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. ಇದರ ಜೊತೆಗೆ ಸಾನಿಯಾ ಅವರ ಭವಿಷ್ಯದ ಯೋಜನೆಗಳಿಗು ಶುಭ ಹಾರೈಸಿದ್ದಾರೆ.

ಈ ವರ್ಷದ ಫೆಬ್ರವರಿಯಲ್ಲಿ ದುಬೈನಲ್ಲಿ ತಮ್ಮ ವೃತ್ತಿಜೀವನದ ಕೊನೆಯ ವೃತ್ತಿಪರ ಪಂದ್ಯವನ್ನು ಆಡಿದ್ದ ಸಾನಿಯಾ, ಆ ಪಂದ್ಯದ ಮೊದಲ ಸುತ್ತಿನಲ್ಲೇ ಸೋತು ಟೂರ್ನಿಯಿಂದ ಹೊರಬಿದ್ದಿದ್ದರು. ಇದಾದ ಬಳಿಕ ಇದೇ ಮಾರ್ಚ್‌ನಲ್ಲಿ ಹೈದರಾಬಾದ್‌ನಲ್ಲಿ ನಡೆದ ವಿದಾಯ ಪಂದ್ಯದಲ್ಲಿ ಸಾನಿಯಾ ಕೊನೆಯ ಬಾರಿಗೆ ಆಡಿದ್ದರು. ಎಲ್​ಬಿ ಸ್ಟೇಡಿಯಂನಲ್ಲಿ ನಡೆದಿದ್ದ ಪಂದ್ಯದ ಮುಖಾಂತರ ಟೆನಿಸ್​ಗೆ ವಿದಾಯ ಹೇಳಿದ ಸಾನಿಯಾ ಅಂದು ಭಾವುಕರಾಗಿ ಕಣ್ಣೀರು ಹಾಕಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!