ಹೊಸದಿಗಂತ ಡಿಜಿಟಲ್ ಡೆಸ್ಕ್
ಭಾರತದ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರ ದಾಂಪತ್ಯ ಜೀವನದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ವದಂತಿಗಳು ಹರಿದಾಡುತ್ತಿವೆ.
ಸಾನಿಯಾ ಮಿರ್ಜಾ ಮತ್ತು ಶೋಯೆಬ್ ಮಲಿಕ್ ವಿಚ್ಛೇದನ ಪಡೆಯುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದೀಗ ಇದು ಖಚಿತ ಎಂದು ಹೇಳಲಾಗುತ್ತಿದೆ.
ಶೋಯೆಬ್ ಮಲಿಕ್ ಸ್ನೇಹಿತರೊಬ್ಬರು ಈ ಬಗ್ಗೆ ಮಾಹಿತಿ ಬಹಿರಂಗಪಡಿಸಿದ್ದು, ಈ ದಂಪತಿಗಳು ಈಗಾಗಲೇ ಬಹಳ ದಿನದಿಂದ ಬೇರೆ ಬೇರೆಯಾಗಿ ವಾಸಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿಯಾಗಿದೆ.
ಶೋಯೆಬ್ ಪಾಕಿಸ್ತಾನಿ ಹುಡುಗಿಯೊಂದಿಗೆ ಕೆಲವು ದಿನಗಳಿಂದ ಡೇಟಿಂಗ್ ನಡೆಸುತ್ತಿದ್ದಾರೆ ಎಂಬ ಸುದ್ದಿ ಕೂಡ ಪಾಕಿಸ್ತಾನ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಇದರಿಂದ ಸಾನಿಯಾ ಮತ್ತು ಶೋಯೆಬ್ ಸಂಬಂಧದಲ್ಲಿ ಬಿರುಕು ಬಿದ್ದಿದೆ. ಆದರೆ ಈ ಇಬ್ಬರೂ ಸಹ ಈ ವದಂತಿಯ ಬಗ್ಗೆ ಅಧಿಕೃತವಾಗಿ ಏನ್ನನ್ನು ಹೇಳಿಲ್ಲ. ಹೀಗಾಗಿ ಶೀಘ್ರದಲ್ಲೇ ಇಬ್ಬರೂ ಕಾನೂನು ವಿಷಯಗಳನ್ನು ಪೂರ್ಣಗೊಳಿಸಿದ ನಂತರ ಬೇರೆಯಾಗಲಿದ್ದಾರೆ ಎಂದು ವರದಿಯಾಗಿದೆ.
ಇತ್ತ ಶೋಯೆಬ್ ಮಲಿಕ್ ಅವರ ಆಪ್ತ ಸ್ನೇಹಿತರೊಬ್ಬರು ಈ ಬಗ್ಗೆ ವಿವರಣೆ ನೀಡಿದ್ದು, ಶೀಘ್ರದಲ್ಲೇ ಇವರಿಬ್ಬರೂ ವಿಚ್ಛೇದನ ಪಡೆಯಲಿದ್ದಾರೆ ಎಂದು ಹೇಳಿದ್ದಾರೆ.