Saturday, July 2, 2022

Latest Posts

‘ನನಗೇನೂ ಗೊತ್ತಿಲ್ಲ, ಎಫ್‌ಎಸ್‌ಎಲ್ ವರದಿ ಬಗ್ಗೆ ಮಾಹಿತಿ ಇಲ್ಲ’

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ನಟಿ ರಾಗಿಣಿ, ಸಂಜನಾ ಡ್ರಗ್ಸ್ ಸೇವನೆ ಎಫ್‌ಎಸ್‌ಎಲ್ ವರದಿಯಲ್ಲಿ ದೃಢಪಟ್ಟಿದ್ದು, ಸಂಜನಾ ಗಲ್ರಾನಿ ಮೊದಲ ಬಾರಿಗೆ ಈ ಬಗ್ಗೆ ಮಾತನಾಡಿದ್ದಾರೆ.
ಎಫ್‌ಎಸ್‌ಎಲ್ ವರದಿ ಬಗ್ಗೆ ನನಗೆ ಮಾಹಿತಿ ಇಲ್ಲ.ನನಗೆ ನಿಜವಾಗಿಯೂ ಏನೂ ಗೊತ್ತಿಲ್ಲ ಎಂದು ಸಂಜನಾ ಹೇಳಿದ್ದಾರೆ.
ತನಿಖೆಯಲ್ಲಿ ಈ ನಟಿಯರು ಕಡಿಮೆ ಡ್ರಗ್ಸ್ ಸೇವನೆ ಮಾಡಿರುವ ಅಂಶ ಬೆಳಕಿಗೆ ಬಂದಿದೆ. ಆದರೆ ಹೆಚ್ಚಿನ ಪ್ರಮಾಣದಲ್ಲಿ ಡ್ರಗ್ಸ್ ಮಾರಾಟ ಮಾಡಿದ್ದಾರೆ ಎಂದು ತಿಳಿದುಬಂದಿದೆ. ನಗರದಲ್ಲಿ ನಡೆಯುತ್ತಿದ್ದ ಹೈಫೈ ಪಾರ್ಟಿಗಳಲ್ಲಿ ನಟಿಯರು ಡ್ರಗ್ಸ್ ಸೇವನೆ ಮಾಡುತ್ತಾರೆ. ಜೊತೆಗೆ ಪಾರ್ಟಿಯಲ್ಲಿ ಕೋಟಿ ಮೌಲ್ಯದ ಡ್ರಗ್ಸ್ ಮಾರಾಟ ಕೂಡ ಆಗುತ್ತಿತ್ತು ಎನ್ನಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss