ಬೆಟ್ಟಿಂಗ್ ಆಪ್ ಪ್ರಕರಣದಲ್ಲಿ ತಳುಕು ಹಾಕಿಕೊಂಡ ಸಂಜಯ್ ದತ್, ಸುನಿಲ್ ಶೆಟ್ಟಿ ಹೆಸರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಆನ್‌ಲೈನ್ ಬೆಟ್ಟಿಂಗ್ ಆಪ್ ಪ್ರಕರಣದಲ್ಲಿ ಬಾಲಿವುಡ್ ನಟರಾದ ಸಂಜಯ್ ದತ್, ಸುನೀಲ್ ಶೆಟ್ಟಿ ಕೂಡ ಭಾಗಿಯಾಗಿರುವುದು ಇಡಿ ತನಿಖೆಯಲ್ಲಿ ಬಹಿರಂಗವಾಗಿದೆ. ಲಯನ್ ಬುಕ್ ಆಫ್‌ ಸಕ್ಸಸ್ ಪಾರ್ಟಿ ಕಳೆದ ವರ್ಷ ಸೆಪ್ಟೆಂಬರ್ 20 ರಂದು ದುಬೈನ ಫೇರ್‌ಮಾಂಟ್ ಹೋಟೆಲ್‌ನಲ್ಲಿ ನಡೆಯಿತು. ಸಂಜಯ್ ದತ್, ಸುನಿಲ್ ಶೆಟ್ಟಿ ಸೇರಿದಂತೆ ಹಲವು ಬಾಲಿವುಡ್ ನಟರು ಪಾರ್ಟಿಯಲ್ಲಿ ಭಾಗವಹಿಸಿದ್ದರು ಎಂದು ಜಾರಿ ನಿರ್ದೇಶನಾಲಯದ (ಇಡಿ) ತನಿಖೆಯಿಂದ ತಿಳಿದುಬಂದಿದೆ.

ಮಹದೇವ್ ಬುಕ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ತನ್ನ ತನಿಖೆಯನ್ನು ಮುಂದುವರೆಸಿದ್ದು, ಈ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳಾದ ಸೌರಭ್ ಚಂದ್ರಾಕರ್ ಮತ್ತು ರವಿ ಉಪ್ಪಲ್ ಅವರು ಭಾರತ ಮತ್ತು ಪಾಕಿಸ್ತಾನದಲ್ಲಿ ದಿ ಲಯನ್ ಬುಕ್ ಆ್ಯಪ್ ನಡೆಸುತ್ತಿರುವುದು ಕಂಡುಬಂದಿದೆ. ಯುಎಇಯಲ್ಲಿ ನಡೆದ ಮಹದೇವ್ ಬುಕ್ ಆ್ಯಪ್ ಪ್ರಮೋಟರ್ ಚಂದ್ರಾಕರ್ ಅವರ ವಿವಾಹ ಸಮಾರಂಭದಲ್ಲಿ ಅನೇಕ ಬಾಲಿವುಡ್ ನಟರು ಮತ್ತು ಗಾಯಕರು ಭಾಗವಹಿಸಿದ್ದರು ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.

ಈ ಪ್ರಕರಣದಲ್ಲಿ ಬಾಲಿವುಡ್ ನಟ ರಣಬೀರ್ ಕಪೂರ್ ಅವರಿಗೂ ಇಡಿ ಸಮನ್ಸ್ ನೀಡಿದೆ. ಇತ್ತೀಚೆಗಷ್ಟೇ ಚಂದ್ರಾಕರ್ ಮತ್ತು ಉಪ್ಪಲ್ ಅವರಿಗೆ ಆಸ್ಟ್ರೇಲಿಯಾ ಪ್ರವೇಶ ನಿರಾಕರಿಸಿ ಯುಎಇಗೆ ವಾಪಸ್ ಕಳುಹಿಸಲಾಗಿತ್ತು. ಕೇಂದ್ರೀಯ ತನಿಖಾ ಸಂಸ್ಥೆ ಮತ್ತು ಛತ್ತೀಸ್‌ಗಢ ಪೊಲೀಸರು ಆಗಸ್ಟ್‌ನಲ್ಲಿ ಇಬ್ಬರ ವಿರುದ್ಧ ಲುಕ್‌ಔಟ್ ಸುತ್ತೋಲೆ ಹೊರಡಿಸಿದ್ದರು. ಭಾರತ ಪ್ರವೇಶಿಸಲು ಯತ್ನಿಸಿದರೆ ಅವರನ್ನು ಬಂಧಿಸುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!