Wednesday, February 8, 2023

Latest Posts

ಉದ್ಧವ್ ಠಾಕ್ರೆ ಬಗ್ಗೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಪುಟಿನ್, ಬಿಡೆನ್, ಕಿಂಗ್ ಚಾರ್ಲ್‌ ಚರ್ಚಿಸಿದ್ದಾರಂತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಅಮೆರಿಕ ಅಧ್ಯಕ್ಷ ಜೋ ಬಿಡನ್, ಬ್ರಿಟನ್ ರಾಜ ಚಾರ್ಲ್ಸ್ III ಈ ಮೂವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕುರಿತು ವಿಡಿಯೋ ಕಾನ್ಫರೆನ್ಸ್‌ನಲ್ಲಿ ಚರ್ಚಿಸಿದ್ದಾರಂತೆ. ಈ ಮೂವರಷ್ಟೇ ಅಲ್ಲ, ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಕೂಡ ಸೇರಿದ್ದಾರೆ ಎಂದು ಶಿವಸೇನೆ (ಉದ್ಧವ್ ಬಣ) ಹಿರಿಯ ನಾಯಕ ಸಂಜಯ್ ರಾವುತ್ ಮಾತನಾಡಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್‌ ಆಗಿದೆ. ಇನ್ನೊಂದು ವಿಷಯವೆಂದರೆ ಉದ್ಧವ್ ಠಾಕ್ರೆ ಅವರನ್ನು ನಮಗೆ ಏಕೆ ಪರಿಚಯಿಸಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಕೇಳಿದ್ದಾರೆ.

ರಾವುತ್ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾಷಣ ಮಾಡಿದರು.ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಬಿಲ್ ಕ್ಲಿಂಟನ್ ಮುಖ್ಯಮಂತ್ರಿ ಏಕನಾಥ್ ಅವರನ್ನು ವಿಚಾರಿಸಿದ್ದಾರೆ ಎಂದು ಶಿಂಧೆ ಹೇಳಿದ್ದಕ್ಕೆ ರಾವತ್ ವಿಡಂಬನಾತ್ಮಕವಾಗಿ ಕಾಮೆಂಟ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!