ಹೊಸದಿಗಂತ ಡಿಜಿಟಲ್ ಡೆಸ್ಕ್:
ಉದ್ಧವ್ ಠಾಕ್ರೆ ಬಣದ ಶಿವಸೇನೆ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ಗೆ ಜೀವ ಬೆದರಿಕೆ ಬಂದಿದೆ.
ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಉದ್ಧವ್ ಠಾಕ್ರೆ ಬಣದ ಶಿವಸೇನೆ ನಾಯಕ ಹಾಗೂ ಸಂಸದ ಸಂಜಯ್ ರಾವತ್ ದೂರು ನೀಡಿದ್ದಾರೆ.
ಜೈಲಿನಲ್ಲಿರುವ ಲಾರೆನ್ಸ್ ನಿನ್ನೆ ರಾತ್ರಿ ಎಸ್ಎಂಎಸ್ ಮೂಲಕ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ರಾವತ್ ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆ.