ಸಂಜಯ್ ರಾವತ್‌ ಬಂಧನ: ಶಿವಸೇನೆಯನ್ನು ನಾಶಪಡಿಸುವ ಸಂಚಿನ ಭಾಗವೆಂದ ಉದ್ಧವ್ ಠಾಕ್ರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಶಿವಸೇನೆ ಸಂಸದ ಸಂಜಯ್ ರಾವತ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಿರುವುದು ಶಿವಸೇನೆಯನ್ನು ನಾಶಪಡಿಸುವ ಸಂಚಿನ ಭಾಗವಾಗಿದೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

“ನನಗೆ ಸಂಜಯ್ ರಾವತ್ ಬಗ್ಗೆ ಹೆಮ್ಮೆ ಇದೆ. ಇದು ನಮ್ಮನ್ನು ನಾಶಮಾಡುವ ಸಂಚು. ನಮ್ಮ ವಿರುದ್ಧ ಯಾರೇ ಮಾತನಾಡಿದರೂ ನಾವು ಅಳಿಸಿ ಹಾಕಬೇಕು. ಇಂತಹ ಮನಸ್ಥಿತಿಯ ಸೇಡಿನ ರಾಜಕಾರಣ ನಡೆಯುತ್ತಿದೆ” ಎಂದು ಠಾಕ್ರೆ ಹೇಳಿದ್ದಾರೆ.

ಮುಂಬೈನಲ್ಲಿ ಪತ್ರಾಚಾಲ್ ಪ್ರಾಜೆಕ್ಟ್‌ನ ಪುನರಾಭಿವೃದ್ಧಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಂಜಯ್ ರಾವತ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಭಾನುವಾರ ಬಂಧಿಸಿದೆ.ರಾವುತ್ ಅವರ ಕುಟುಂಬವನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಠಾಕ್ರೆ, “ಕಾಂಗ್ರೆಸ್ ಕೂಡ 60 ರಿಂದ 65 ವರ್ಷಗಳ ಕಾಲ ಆಡಳಿತ ನಡೆಸಿದೆ, ಆದರೆ ಈಗ ಅವರನ್ನು ನೋಡಿ. ಯಾವುದೂ ಶಾಶ್ವತವಲ್ಲ. ಕಳೆದ 2.5 ವರ್ಷಗಳಿಂದ ನಾನು ನಿರ್ವಹಿಸಿದ ಮುಖ್ಯಮಂತ್ರಿ ಸ್ಥಾನದಲ್ಲಿ ಈಗ ನಾನಿಲ್ಲ. ನಾನು ಮಮತಾ ಬ್ಯಾನರ್ಜಿ ಮತ್ತು ಕೆಎಸ್‌ಆರ್‌ನಂತಹ ಪ್ರಾದೇಶಿಕ ಪಕ್ಷದ ನಾಯಕರೊಂದಿಗೆ ಸಂಪರ್ಕದಲ್ಲಿದ್ದೇನೆ. ಪ್ರಾದೇಶಿಕ ಶಕ್ತಿಗಳನ್ನು ನಾಶಮಾಡಲು ಬಿಜೆಪಿ ಯೋಜಿಸುತ್ತಿದೆ” ಎಂದಿದ್ದಾರೆ.

ಭಾನುವಾರ ಮಧ್ಯರಾತ್ರಿಯ ನಂತರ ದಕ್ಷಿಣ ಮುಂಬೈನ ಬಲ್ಲಾರ್ಡ್ ಎಸ್ಟೇಟ್‌ನಲ್ಲಿರುವ ED ಯ ವಲಯ ಕಚೇರಿಯಲ್ಲಿ ಆರು ಗಂಟೆಗಳ ಕಾಲ ವಿಚಾರಣೆಯ ನಂತರ ರಾವುತ್ ಅವರನ್ನು ಬಂಧಿಸಲಾಯಿತು. ಪತ್ರಾ ಚಾಲ್ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಲಾದ ಒಂಬತ್ತು ಗಂಟೆಗಳ ಸುದೀರ್ಘ ದಾಳಿಯಲ್ಲಿ ಸಂಜಯ್ ರಾವುತ್ ಅವರ ನಿವಾಸದಿಂದ ಇಡಿ 11.50 ಲಕ್ಷ ರೂಪಾಯಿ ಮೌಲ್ಯದ ನಗದನ್ನು ವಶಪಡಿಸಿಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!