ಜೈಲು ಶಿಕ್ಷೆ ತೀರ್ಪಿನ ಬೆನ್ನಲ್ಲೇ ಸಂಜಯ್ ರಾವತ್‌ಗೆ ಜಾಮೀನು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾನನಷ್ಟ ಪ್ರಕರಣವೊಂದರಲ್ಲಿ ಶಿವಸೇನೆ (ಉದ್ಧವ್ ಬಣ) ನಾಯಕ ಸಂಜಯ್ ರಾವತ್ ಗೆ ಮುಂಬೈನ ಮಝಗಾಂವ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಜೈಲು ಶಿಕ್ಷೆ ಮತ್ತು ರೂ. 25,000 ದಂಡ ವಿಧಿಸಿತ್ತು. ಇದರ ಬೆನ್ನಲ್ಲೇ ಕೆಲ ಗಂಟೆಯಲ್ಲೇ ಜಾಮೀನು ಸಿಕ್ಕಿದೆ.

ಬಿಜೆಪಿ ನಾಯಕ ಕಿರಿಟ್ ಸೋಮಯ್ಯ ಅವರ ಪತ್ನಿ ಡಾ.ಮೇಧಾ ಕಿರಿಟ್ ಸೋಮಯ್ಯ ಅವರ ದೂರಿನ ಮೇರೆಗೆ ರಾವತ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್ 15 ದಿನಗಳ ಜೈಲು ಶಿಕ್ಷೆ ವಿಧಿಸಿತ್ತು. ಅಲ್ಲದೆ ಕೋರ್ಟ್ ಶಿಕ್ಷೆಯನ್ನು 30 ದಿನಗಳವರೆಗೆ ಅಮಾನತುಗೊಳಿಸಿತ್ತು. ಈ ಬಳಿಕ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಸಲ್ಲಿಸಿದ ಅರ್ಜಿಯ ಮೇರೆಗೆ ಜಾಮೀನು ನೀಡಿದೆ.

ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಆರತಿ ಕುಲಕರ್ಣಿ ಅವರು ಭಾರತೀಯ ದಂಡ ಸಂಹಿತೆ ಸೆಕ್ಷನ್ 500ರ ಅಡಿಯಲ್ಲಿ ರಾವುತ್ ಅವರನ್ನು ದೋಷಿ ಎಂದು ತೀರ್ಪು ನೀಡಿದರು. ಜೈಲು ಶಿಕ್ಷೆಯ ಜೊತೆಗೆ 25,000 ರೂಪಾಯಿ ದಂಡವನ್ನೂ ನ್ಯಾಯಾಲಯ ವಿಧಿಸಿತ್ತು.

ನ್ಯಾಯಾಲಯದ ತೀರ್ಪಿನ ನಂತರ, ರಾವುತ್ ಪರ ವಕೀಲರು ಶಿಕ್ಷೆಯನ್ನು ಅಮಾನತುಗೊಳಿಸಲು ಮತ್ತು ಅವರಿಗೆ ಜಾಮೀನು ನೀಡುವಂತೆ ಎರಡು ಅರ್ಜಿಗಳನ್ನು ಸಲ್ಲಿಸಿದ್ದು ಇದನ್ನು ಪುರಸ್ಕರಿಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

 

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!