ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸಂಜೀವ್ ಖನ್ನಾ ಅವರನ್ನು ನೇಮಕ ಮಾಡಿ ರಾಷ್ಟ್ರಪತಿಗಳು ಆದೇಶ ನೀಡಿದ್ದಾರೆ.
ಹಾಲಿ ಸಿಜೆಐ ಡಿ.ವೈ.ಚಂದ್ರಚೂಡ್ ಅವರು ಕೇಂದ್ರ ಕಾನೂನು ಸಚಿವಾಲಯಕ್ಕೆ ಪತ್ರ ಬರೆದ ಕೆಲವೇ ದಿನಗಳಲ್ಲಿ ರಾಷ್ಟ್ರಪತಿಗಳು ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿದ್ದಾರೆ. ಈ ನೇಮಕಾತಿ ನವೆಂಬರ್ 11 ರಿಂದ ಜಾರಿಗೆ ಬರಲಿದೆ.
ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ, ಗೌರವಾನ್ವಿತ ರಾಷ್ಟ್ರಪತಿಗಳು, ಭಾರತದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಸಮಾಲೋಚಿಸಿದ ನಂತರ, ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ನವೆಂಬರ್ 11 ರಿಂದ ಜಾರಿಗೆ ಬರುವಂತೆ ಸುಪ್ರೀಂ ಕೋರ್ಟ್ ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಸಂತೋಷಪಡುತ್ತಾರೆ ಎಂದು ತಿಳಿಸಿದ್ದಾರೆ.
ನ್ಯಾಯಮೂರ್ತಿ ಖನ್ನಾ ಅವರು ನವೆಂಬರ್ 11 ರಿಂದ ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ. ಸಿಜೆಐ ಚಂದ್ರಚೂಡ್ ಅವರು ನವೆಂಬರ್ 10, 2024 ರಂದು ನಿವೃತ್ತರಾಗಲಿದ್ದಾರೆ.