ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಇಂದು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ(CJI) ಪ್ರಮಾಣವಚನ ಸ್ವೀಕರಿಸಿದ್ದಾರೆ.
ಚುನಾವಣಾ ಬಾಂಡ್ ರದ್ದತಿ, ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ವಿಧಿ ರದ್ದತಿ ಎತ್ತಿ ಹಿಡಿದಂತಹ ಪ್ರಮುಖ ವಿಷಯಗಳ ತೀರ್ಪು ಪ್ರಕಟಿಸಿದ್ದ ನ್ಯಾ| ಸಂಜೀವ್ ಖನ್ನಾ ಅವರು ಸುಪ್ರೀಂಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಸೋಮವಾರ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ನಿರ್ಗಮಿತ ನ್ಯಾಯಮೂರ್ತಿಡಿ.ವೈ ಚಂದ್ರಚೂಡ್ ಅವರಿಂದ ತೆರವಾದ ಸ್ಥಾನಕ್ಕೆ ಈಗ ಸಂಜೀವ್ ಖನ್ನಾ ಏರುತ್ತಿದ್ದು, ಮೇ. 13, 2025 ರವರೆಗೆ ಅಧಿಕಾರದಲ್ಲಿ ಇರಲಿದ್ದಾರೆ. ನ್ಯಾ. ಖನ್ನಾ ಅವರ ತಂದೆ ದೇವ್‌ರಾಜ್ ಖನ್ನಾ ಕೂಡ ದೆಹಲಿ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿದ್ದರು.